ಕಲಬುರಗಿ | ವಿಕಲಚೇತನರು ಅಭ್ಯಾಸದ ಜೊತೆಗೆ ಕ್ರೀಡೆಗಳಲ್ಲಿ ಭಾಗವಹಿಸಿ ಜಯಿಸಬೇಕು : ರಾಯಪ್ಪ ಹುಣಸಗಿ

Update: 2024-11-22 13:09 GMT

ಕಲಬುರಗಿ : ಜಿಲ್ಲೆಯ ಎಲ್ಲಾ ವಿಕಲಚೇತನ ವಿದ್ಯಾರ್ಥಿಗಳು ಅಭ್ಯಾಸದ ಜೊತೆಗೆ ಕ್ರೀಡೆಗಳಲ್ಲಿ ಭಾಗವಹಿಸಿ ಜಯಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಹೇಳಿದ್ದಾರೆ.

ಗುರುವಾರದಂದು ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಎಲ್ಲಾ ಸಂಘ/ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಎಂ.ಆರ್.ಡಬ್ಲ್ಯೂ/ಯು.ಆರ್.ಡಬ್ಲ್ಯೂ/ವಿ.ಆರ್.ಡಬ್ಲ್ಯೂ ರವರ ಸಂಯುಕ್ತಾಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ -2024ರ ಪ್ರಯುಕ್ತ ವಿಕಲಚೇತನರಿಗಾಗಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಫಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಪ್ರತಿಯೊಬ್ಬರು ಕ್ರೀಡೆಗಳಲ್ಲಿ ಸಂತೋಷದಿಂದ ಭಾಗವಹಿಸಿ ಗೆಲವು ಸಾಧಿಸಬೇಕು ಎಂದರು.

ವಿಕಲಚೇತನರು ಯಾವಾಗಲು ಒದುವುದರ ಜೊತೆಗೆ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಳ್ಳಬೇಕು. ಸರಕಾರದಿಂದ ಸಿಗುವ ಪ್ರತಿಯೊಂದು ಸೌವಲತ್ತುಗಳನ್ನು ಪಡೆದುಕೊಳ್ಳಬೇಕು, ಯಾವುದೇ ಕ್ರೀಡೆಯಲ್ಲಿ ಸೋಲು- ಗೆಲುವು ಇದ್ದೆ ಇರುತ್ತದೆ. ಕ್ರೀಡೆಗಳಲ್ಲಿ ಭಾಗವಹಿಸಿ ಒಳ್ಳೆಯ ಕೀರ್ತಿ ತರಬೇಕೆಂದು ಹೇಳಿದರು.

ವಿಕಲಚೇತನರು ಕ್ರಿಕೆಟ್, ರನ್ನಿಂಗ್, ಶಾರ್ಟ್‌ಪುಟ್, ಉದ್ದ ಜಿಗತ, ಇತರ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ ಕೆ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಸಾದಿಕ ಹುಸೇನ್ ಖಾನ್, ಅಂತರ್‌ರಾಷ್ಟ್ರೀಯ ಕ್ರೀಡಾಪಟು ರಮೇಶ ಜಾಧವ್, ಚಂದ್ರಿಕಾ ಪರಮೇಶ್ವರ್, ದತ್ತು ಅಗ್ರವಾಲ್, ಕಲಬುರಗಿ ವಿನಾಯಕ ಎಜುಕೇಷನಲ್ ಸೂಸೈಟಿಯ ಶ್ರೀಮಂತ ರೇವೂರ್, ಶ್ರೀಯಾನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಾಜು ಶಾಖಾಪುರ, ಅಂಗವಿಕಲರ ಪುನರ್ವವಸತಿ ಕೇಂದ್ರ ನೋಡಲ್ ಅಧಿಕಾರಿ ಪ್ರಕಾಶ ದ್ಯಾಬೇರಿ, ದೈಹಿಕ ಶಿಕ್ಷಕ ಪ್ರಕಾಶ ಭಜಂತ್ರಿ, ಸರಕಾರಿ ಕಿವೂಡ ಮಕ್ಕಳ ಶಾಲೆಯ ಅಧೀಕ್ಷಕ ಲೋಕೇಶ, ಎಲ್ಲಾ ತಾಲ್ಲೂಕಿನ ಎಂ.ಆರ್.ಡಬ್ಲ್ಯೂಗಳು ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News