ಕಲಬುರಗಿ | ನ.15 ರಂದು ಕರ್ನಾಟಕ ಉಪ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

Update: 2024-11-05 16:56 GMT

ಕಲಬುರಗಿ : ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಅವರು ಇದೇ ನವೆಂಬರ್ 15 ರಿಂದ 17ರವರೆಗೆ ಕಲಬುರಗಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ನವೆಂಬರ್ 15ರಂದು ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆವರೆಗೆ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ನಡೆಸಲಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ಕಲಬುರಗಿ ಎಸ್.ಪಿ. ಉಮೇಶ ಬಿ.ಕೆ. ಅವರು ತಿಳಿಸಿದ್ದಾರೆ.

ಅಂದು ನಡೆಯುವ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಯಾರಿಗಾದರು ಸರಕಾರಿ ಅಧಿಕಾರಿ-ನೌಕರರಿಂದ ಕಾನೂನು ರೀತಿಯಲ್ಲಿ ಆಗಬೇಕಾದ ಕೆಲಸದಲ್ಲಿ ವಿಳಂಬವಾಗಿದಲ್ಲಿ ಅಥವಾ ಅಧಿಕಾರಿ/ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ಭ್ರಷ್ಟಾಚಾರ ಮತ್ತು ದುರಾಡಳಿತದಲ್ಲಿ ತೊಡಗಿದ್ದರೆ ತೊಂದರೆಗೊಳಗಾದ ಸಾರ್ವಜನಿಕರು ಉಪ ಲೋಕಾಯುಕ್ತರ ಮುಂದೆ ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ನ.16ಕ್ಕೆ ಪ್ರಕರಣಗಳ ವಿಚಾರಣೆ :

ಉಪಲೋಕಾಯುಕ್ತ ನ್ಯಾ. ಬಿ.ವೀರಪ್ಪ ಅವರು ನ.16 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆವರೆಗೆ ಕಲಬುರಗಿ ನಗರದ ಡಾ.ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಕಲಬುರಗಿ ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ಪೈಕಿ ತಮ್ಮ ಕಾರ್ಯವ್ಯಾಪ್ತಿಗೆ ಒಳಪಡುವ ತನಿಖೆ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳನ್ನು ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತಿಯಲ್ಲಿ ವಿಚಾರಣೆ ನಡೆಸಲಿದ್ದು, ಈ ಸಂಬಂಧ ಉಪ ಲೋಕಾಯುಕ್ತ ಕಚೇರಿಯಿಂದ ನೋಟಿಸ್ ಪಡೆದ ದೂರುದಾರರು ಮತ್ತು ಎದುರುದಾರರು ನಿಗದಿತ ಸಮಯದಲ್ಲಿ ಹಾಜರಿರಬೇಕೆಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಕಚೇರಿ, ಐವಾನ್ ಶಾಹಿ, ಕಂಪೌಂಡ್, ಕಲಬುರಗಿ-585102 ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472-295364ಗೆ ಸಂಪರ್ಕಿಸಲು ಕೋರಲಾಗಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News