ಕಲಬುರಗಿ | ಸಾವಿತ್ರಿಬಾಯಿ ಫುಲೆ ಇಂದಿಗೂ ಶೋಷಿತರ ಧ್ವನಿಯಾಗಿ ಜೀವಂತ : ತೇಗಲತಿಪ್ಪಿ

Update: 2025-01-03 14:55 GMT

ಕಲಬುರಗಿ : ಶಿಕ್ಷಣವೆಂದರೆ ತಿಳಿಯದ, ಅಕ್ಷರಗಳೆಂದರೆ ಗೊತ್ತಿಲ್ಲದ ಕಾಲದಲ್ಲಿ ಶಾಲೆಗಳನ್ನು ತೆರೆದು ಭಾರತದಲ್ಲಿ ಅಕ್ಷರ ಕ್ರಾಂತಿ ಆರಂಭಿಸಿದ ಮೊದಲ ಮಹಿಳೆ ಸಾವಿತ್ರಿಬಾಯಿ ಫುಲೆ ಆಗಿದ್ದಾರೆ. ಮಹಿಳಾ ಶಿಕ್ಷಣ, ಮಹಿಳಾ ಹಕ್ಕುಗಳು ಹೀಗೆ ಮಹಿಳಾ ಶೋಷಿತರ ಪರ ಹಲವಾರು ಸುಧಾರಣೆಯ ಕನಸುಗಳನ್ನು ಹೊತ್ತ ಸಾವಿತ್ರಿಬಾಯಿ ಫುಲೆ ದೈಹಿಕವಾಗಿ ಇಲ್ಲದಿದ್ದರೂ ಮಹಿಳಾ ಮತ್ತು ಶೋಷಿತ ಸಮುದಾಯದ ಧ್ವನಿಯಾಗಿ ಅವರು ಇಂದಿಗೂ ಜೀವಂತವಾಗಿದ್ದಾರೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಕನ್ನಡ ಭವನದಲ್ಲಿ ಶನಿವಾರ ಹಮ್ಮಿಕೊಂಡ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹಿರಿಯ ಅರ್ಥಶಾಸ್ತ್ರಜ್ಞ ಡಾ. ಬಸವರಾಜ ಕುಮ್ನೂರ ಮಾತನಾಡಿ, ಅಂದಿನ ಸಮಾಜದ ಬಹಿಷ್ಕಾರ ಹಾಗೂ ಹೆಜ್ಜೆ ಹೆಜ್ಜೆಗೂ ಅವಮಾನ ಅನುಭವಿಸಿದರೂ, ಛಲ ಬಿಡದೇ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿದ ಸಾವಿತ್ರಿಬಾಯಿ ಫುಲೆ ಅವರನ್ನು ನಾವು ಎಂದೂ ಮರೆಯಬಾರದು ಎಂದು ಹೇಳಿದರು.

ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ನಿವೃತ್ತ ಕೃಷಿ ಅಧಿಕಾರಿ ಬಿ.ಎನ್. ಪುಣ್ಯಶೆಟ್ಟಿ, ಎಕೆಆರ್ ದೇವಿ ಪಿಯು ಕಾಲೇಜಿನ ಆಡಳಿತಾಧಿಕಾರಿ ವಿದ್ಯಾಸಾಗರ ದೇಶಮುಖ, ಹಿರಿಯ ಸಾಹಿತಿ ನರಸಿಂಗರಾವ ಹೇಮನೂರ, ಪ್ರಮುಖರಾದ ಶಕುಂತಲಾ ಪಾಟೀಲ, ಶಿಲ್ಪಾ ಜೋಶಿ, ಜ್ಯೋತಿ ಕೋಟನೂರ, ರೂಪಾ ಪೂಜಾರಿ, ಬಾಬುರಾವ ಕೋಬಾಳ, ದತ್ತರಾಜ ಕಲಶೆಟ್ಟಿ, ಸೈಯದ್ ನಜಿರುದ್ದೀನ್ ಮುತ್ತವಲಿ, ನವಾಬ್ ಖಾನ್, ರಾಜೇಂದ್ರ ಮಾಡಬೂಳ, ಗಣೇಶ ಚಿನ್ನಾಕಾರ, ಶಿವಶರಣ ಬಡದಾಳ, ರಾಜಶೇಖರ ಯಾಳಗಿ, ಶರಣಬಸಪ್ಪ ನರೂಣಿ, ವಿನೋದಕುಮಾರ ಜೇನವೇರಿ, ಮಂಜುನಾಥ ಕಂಬಾಳಿಮಠ, ಸೋಮಶೇಖರಯ್ಯಾ ಹೊಸಮಠ, ರಮೇಶ ಡಿ ಬಡಿಗೇರ, ಸಂಗಣ್ಣ ಚೋರಗಸ್ತಿ, ಪ್ರಭವ ಪಟ್ಟಣಕರ್, ಪ್ರಭುಲಿಂಗ ಮೂಲಗೆ, ಪದ್ಮಾವತಿ ನಾಯಕ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News