ಕಲಬುರಗಿ | ದಕ್ಷಿಣ ವಲಯದ ಕಸಾಪಕ್ಕೆ ಶಹಾಪುರಕರ್ ನೇಮಕ

Update: 2024-12-17 09:59 GMT

ಕಲಬುರಗಿ : ಕನ್ನಡ ಸಾಹಿತ್ಯ ಪರಿಷತ್ ನ ದಕ್ಷಿಣ ವಲಯದ ಅಧ್ಯಕ್ಷರನ್ನಾಗಿ ತಾಜ್ ಸುಲ್ತಾನ್ ಪುರ ಗ್ರಾಪಂ ಸದಸ್ಯರೂ ಆದ ಕಲ್ಪವೃಕ್ಷ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರವಿಕುಮಾರ ಶಹಾಪುರಕರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಹಿಂದೆ ಅಧ್ಯಕ್ಷರಾಗಿದ್ದ ಪತ್ರಕರ್ತ ಶಾಮಸುಂದರ ಕುಲಕರ್ಣಿ ಅವರು ವಿಜಯಪುರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿನ್ನೆಲೆ ಅವರ ಜವಾಬ್ದಾರಿಯನ್ನು ರವಿಕುಮಾರ ಶಹಾಪುರಕರ್ ಅವರಿಗೆ ನೀಡಲಾಗಿದೆ.

ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ ನ ಆಶಯಗಳಿಗೆ ತಕ್ಕಂತೆ ಕಾರ್ಯನಿರ್ವಹಿಸಿ ಕನ್ನಡ ಕಟ್ಟುವ ಕಾಯಕದಲ್ಲಿ ಸೇವೆ ಸಲ್ಲಿಸಬೇಕೆಂದು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News