ಕಲಬುರಗಿ | ಶಾರ್ಟ್ ಸರ್ಕ್ಯೂಟ್ : ಮನೆ ಬೆಂಕಿಗಾಹುತಿ

Update: 2025-01-16 09:56 GMT

ಕಲಬುರಗಿ : ಶಾರ್ಟ್ ಸರ್ಕ್ಯೂಟ್ ನಿಂದಾಗಿ ತೋಟದ ಮನೆಯೊಂದು ಮನೆ ಬೆಂಕಿಗಾಹುತಿಯಾದ ಘಟನೆ ಯಡ್ರಾಮಿ ತಾಲೂಕಿನಲ್ಲಿ ಬುಧವಾರ ನಡೆದಿರುವುದು ವರದಿಯಾಗಿದೆ.

ಯಡ್ರಾಮಿ ತಾಲೂಕಿನ ಬಿರಾಳ್ ಗ್ರಾಮದ ಈರಣ್ಣ ಭಜಂತ್ರಿ ಎಂಬ ರೈತರಿಗೆ ಸೇರಿದ ತೋಟದ ಮನೆಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ.

ಈ ಘಟನೆಯಿಂದಾಗಿ ಮನೆಯಲ್ಲಿದ್ದ ಅಪಾರ ಪ್ರಮಾಣದ ದವಸ ಧಾನ್ಯ, ಮನೆಯ ಪರಿಕರಗಳು ಸುಟ್ಟು ಭಸ್ಮವಾಗಿವೆ. ಮನೆಯಲ್ಲಿದ್ದ 10 ಲಕ್ಷ ರೂ. ಮೌಲ್ಯದ ಹತ್ತಿ, ತೊಗರಿ ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಪ್ರಕರಣ ಯಡ್ರಾಮಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News