ಕಲಬುರಗಿ | ಮತದಾರರ ನೋಂದಣಿಗೆ ನ.23, 24ರಂದು ವಿಶೇಷ ಅಭಿಯಾನ : ಬಿ.ಫೌಝಿಯಾ ತರನ್ನುಮ್

Update: 2024-11-21 20:10 IST
Photo of B.Fauzia Tarannum

ಬಿ.ಫೌಝಿಯಾ ತರನ್ನುಮ್ 

  • whatsapp icon

ಕಲಬುರಗಿ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜನವರಿ1, 2025ರಂದು ಅರ್ಹತಾ ದಿನವನ್ನಾಗಿ ಪರಿಗಣಿಸಿಕೊಂಡು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು, ಅರ್ಹ ಮತದಾರರನ್ನು ಸೇರ್ಪಡೆಗೊಳಿಸುವ ಸಂಬಂಧ ಇದೇ ನ.23 (ಶನಿವಾರ) ಹಾಗೂ 24 (ಭಾನುವಾರ) ರಂದು ಜಿಲ್ಲೆಯಾದ್ಯಂತ ಮತದಾರರ ನೋಂದಣಿಗೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಝಿಯಾ ತರನ್ನುಮ್ ತಿಳಿಸಿದ್ದಾರೆ.

ಮತದಾರರ ಪರಿಷ್ಕರಣೆ ಸಂಬಂಧ ಈಗಾಗಲೆ ಕಳೆದ ಅ.29 ರಂದು ಕರಡು ಮತದಾರರ ಪಟ್ಟಿ ಜಿಲ್ಲೆಯ 9 ವಿಧಾನಸಭಾ ಮತಕ್ಷೇತ್ರಗಳ ನಿಗದಿತ ಸ್ಥಳಗಳಲ್ಲಿ ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯ 2,400 ಮತಗಟ್ಟೆ ಕೇಂದ್ರಗಳಲ್ಲಿ ಮತದಾರರ ಪಟ್ಟಿಯ ವಿಶೇಷ ನೊಂದಣಿ ಅಭಿಯಾನ ಏರ್ಪಡಿಸಲಾಗಿದ್ದು, ಸದರಿ ಅಭಿಯಾನದಲ್ಲಿ ಯುವ ಮತದಾರರು ಮತ್ತು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸದೇ ಇರುವ ಅರ್ಹ ಮತದಾರರು ತಮ್ಮ ಮತಗಟ್ಟೆ ಕೇಂದ್ರಗಳಿಗೆ ತೆರಳಿ ನಮೂನೆ-6ರಲ್ಲಿ ಅರ್ಜಿ ಭರ್ತಿ ಮಾಡಿ ಅದರೊಂದಿಗೆ ಅಗತ್ಯ ದಾಖಲೆಗಳನ್ನು ಮತಗಟ್ಟೆ ಅಧಿಕಾರಿಗಳಿಗೆ ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News