ಕಲಬುರಗಿ | ಯಳಸಂಗಿ ಆರೋಗ್ಯ ಕೇಂದ್ರಕ್ಕೆ ರಾಜ್ಯ ಪ್ರಶಸ್ತಿ

ಕಲಬುರಗಿ : ಆಳಂದ ತಾಲ್ಲೂಕಿನ ಯಳಸಂಗಿ ಪ್ರಾಥಮಿಕ ಆರೋಗ್ಯ ಕೇಂದ್ರವು ಉತ್ತಮ ಸಾರ್ವಜನಿಕ ಆರೋಗ್ಯ ಸೇವೆ, ಸ್ವಚ್ಚತೆ ಮತ್ತು ಸಮಯ ಪಾಲನೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.
ಈ ಪ್ರಶಸ್ತಿಯನ್ನು ಗುಣಮಟ್ಟ ಭರವಸೆ ಮಾನದಂಡಗಳನ್ನು (ಓಕಿಂS) ಪೂರೈಸಿದ ಹಿನ್ನೆಲೆಯಲ್ಲಿ ನೀಡಲಾಗಿದೆ.
ಹಾಸ್ಪಿಟಲ್ ಆಡಳಿತ ವೈದ್ಯಾಧಿಕಾರಿ ಡಾ.ಉಸ್ಮಾನಸಾಬ ಸುತಾರ ಪ್ರಕಾರ, ರಾಜ್ಯಮಟ್ಟದ ನೋಡಲ್ ಅಧಿಕಾರಿಗಳು ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಭೇಟಿಗೆ ಹೋಗಿ, ಸೇವೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ರೋಗಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿ, ಆರೋಗ್ಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಿದ್ದು, ಇದಕ್ಕೆ ರಾಜ್ಯ ಮಟ್ಟದಲ್ಲಿ ಮಾನ್ಯತೆ ದೊರಕಿದೆ ಎಂದು ಹೇಳಿದ್ದಾರೆ.
“ನಮ್ಮ ಪ್ರಾಥಮಿಕ ಆರೋಗ್ಯ ಕೇಂದ್ರವು ಆಯ್ಕೆಯಾಗಿರುವುದಕ್ಕೆ ಸಂತೋಷವಾಗಿದೆ. ಈ ಯಶಸ್ಸಿಗೆ ಮಾರ್ಗದರ್ಶನ ನೀಡಿದ ಜಿಲ್ಲಾ ಆರೋಗ್ಯ ಕಲ್ಯಾಣ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಎನ್‌ಕ್ಯೂಎಸ್ ಜಿಲ್ಲಾ ಅಧಿಕಾರಿಗಳಿಗೆ ಧನ್ಯವಾದಗಳು. ಇದಕ್ಕೆ ಸಹಕರಿಸಿದ ಎಲ್ಲ ಸಿಬ್ಬಂದಿಗೂ ಅಭಿನಂದನೆಗಳು. ಇದು ಇನ್ನಷ್ಟು ಉತ್ತಮ ಸೇವೆಗಾಗಿ ಪ್ರೋತ್ಸಾಹವಾಗಲಿದೆ,” ಎಂದು ಡಾ.ಉಸ್ಮಾನಸಾಬ ಸುತಾರ ತಿಳಿಸಿದ್ದಾರೆ.