ಕಲಬುರಗಿ | ಶಿಕ್ಷಕರ ರಾಜ್ಯಮಟ್ಟದ ತಾತ್ಕಾಲಿಕ ಕರಡು ಜೇಷ್ಠತಾ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ

ಕಲಬುರಗಿ : ಕಲಬುರಗಿ ಆಯುಕ್ತಾಲಯದ 7 ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರ ರಾಜ್ಯಮಟ್ಟದ ತಾತ್ಕಾಲಿಕ ಕರಡು ಜೇಷ್ಠತಾ ಪಟ್ಟಿಯನ್ನು ಎ.25 ರಂದು ಇಲಾಖೆಯ https://schooleducation.karnataka.gov.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಕಲಬುರಗಿ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯ ವಿಭಾಗೀಯ ಸಹನಿರ್ದೇಶಕ ಮೊಹನ್ ಕುಮಾರ್ ಹಂಚಾಟೆ ಅವರು ತಿಳಿಸಿದ್ದಾರೆ.
ಕಲಬುರಗಿ ವಿಭಾಗ ವ್ಯಾಪ್ತಿಯ ಜಿಲ್ಲೆಗಳ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹ ಶಿಕ್ಷಕರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರ ತಾತ್ಕಾಲಿಕಾ ಜೇಷ್ಠತಾ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ಶಾಲಾ ಶಿಕ್ಷಕರು ಮುಖ್ಯಗುರುಗಳಿಗೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಹಾಗೂ ಉಪನಿರ್ದೇಶಕರ ಕಚೇರಿಗಳಲ್ಲಿ ಎ.25 ರಿಂದ ಮೇ 17 ರೊಳಗಾಗಿ ನಿಗದಿತ ಆಕ್ಷೇಪಣಾ ನಮೂನೆಯಲ್ಲಿ ಸೂಕ್ತ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.