ಕಲಬುರಗಿ | ಕಲ್ಲುತೂರಾಟ ಪ್ರಕರಣ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ
Update: 2024-12-16 11:46 GMT
ಕಲಬುರಗಿ : ಇತ್ತೀಚೆಗೆ ಕಲಬುರಗಿ ನಗರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ನಡೆದ ಹೋರಾಟದ ವೇಳೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕಲ್ಲುತೂರಾಟ ಪ್ರಕರಣದಲ್ಲಿ ಸಾರ್ವಜನಿಕ ಆಸ್ತಿ ನಾಶಪಡಿಸಿದ್ದಾರೆಂದು ಆರೋಪಿಸಿ ಹಲವು ಮಂದಿ ಇಲ್ಲಿನ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಸೋಮವಾರ ಮಣಿಕಂಠ ರಾಠೋಡ್ ಮತ್ತೊಂದು ಪ್ರಕರಣದಲ್ಲಿ ಜಾಮೀನು ಪಡೆದು ಹೊರಬರುತ್ತಿದ್ದಂತೆ ಬ್ರಹ್ಮಪುರ ಠಾಣೆಯ ಎದುರುಗಡೆಯೇ ಸ್ಟೇಷನ್ ಬಜಾರ್ ಪೊಲೀಸರು ಆತನನ್ನು ಬಂಧಿಸಿ ಕರೆದೊಯ್ದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.