ಕಲಬುರಗಿ | ಆಟವಾಡುತ್ತಿದ್ದ ವೇಳೆ ಬೀದಿ ನಾಯಿ ದಾಳಿ : ಬಾಲಕನಿಗೆ ಗಂಭೀರ ಗಾಯ
Update: 2025-03-24 22:34 IST

ಸಾಂದರ್ಭಿಕ ಚಿತ್ರ
ಕಲಬುರಗಿ : ನಗರದಲ್ಲಿ ದಿನೇ ದಿನೇ ಬೀದಿ ನಾಯಿಗಳ ಅಟ್ಟಹಾಸ ಹೆಚ್ಚಾಗುತ್ತಿದ್ದು, ಇಲ್ಲಿನ ವಿದ್ಯಾನಗರ ಬಡಾವಣೆಯಲ್ಲಿ ಮನೆ ಮುಂಭಾಗ ಆಟವಾಡುತ್ತಿದ್ದ ಬಾಲಕನಿಗೆ ಬೀದಿ ನಾಯಿ ಕಡಿದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ಸೋಮವಾರ ನಡೆದಿದೆ.
ನಗರದ ವಾರ್ಡ್ ನಂ.44 ರ ವ್ಯಾಪ್ತಿಯಲ್ಲಿ ಬರುವ ವಿದ್ಯಾನಗರ ಬಡಾವಣೆಯ ನಿವಾಸಿ 6 ವರ್ಷದ ಬಾಲಕ ಮಲ್ಲಿಕಾರ್ಜುನ್ ಗಾಯಗೊಂಡ ಬಾಲಕ ಎನ್ನಲಾಗಿದೆ.
ಮಲ್ಲಿಕಾರ್ಜುನ್, ಮನೆ ಮುಂದೆ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಏಕಾಏಕಿ ಬಾಲಕನ ಮೇಲೆ ಬೀದಿನಾಯಿ ದಾಳಿ ಮಾಡಿ ಕಾಲಿಗೆ ಗಂಭೀರವಾಗಿ ಕಚ್ಚಿದೆ. ತಕ್ಷಣ ಬಾಲಕನನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಇನ್ನೂ ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕದ ಪಾಲಿಕೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.