ದಿಲ್ಲಿ ಗಣರಾಜ್ಯೋತ್ಸವ ಸಮಾರಂಭಕ್ಕೆ ಅತಿಥಿಯಾಗಿ ಕಲಬುರಗಿ ವಿದ್ಯಾರ್ಥಿನಿ ಆಯ್ಕೆ

Update: 2025-01-23 20:58 IST
ದಿಲ್ಲಿ ಗಣರಾಜ್ಯೋತ್ಸವ ಸಮಾರಂಭಕ್ಕೆ ಅತಿಥಿಯಾಗಿ ಕಲಬುರಗಿ ವಿದ್ಯಾರ್ಥಿನಿ ಆಯ್ಕೆ

ನಿಶಾರಾಣಿ ಚಂದ್ರಕಾoತ ದೇವಕತ

  • whatsapp icon

ಕಲಬುರಗಿ: ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಬಿ.ಕಾಂ. ಮೂರನೇ ಸೆಮಿಸ್ಟರ್‌ನ ಎನ್.ಎಸ್.ಎಸ್ ವಿದ್ಯಾರ್ಥಿನಿ ನಿಶಾರಾಣಿ ಚಂದ್ರಕಾoತ ದೇವಕತ ಅವರು ಎನ್.ಎಸ್.ಎಸ್. ಹಲವಾರು ಚಟುವಟಿಕೆಗಳಲ್ಲಿ ಭಾಗವಹಿಸಿ ಅದರಲ್ಲೂ “ಮೈ ಭಾರತ”ನ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದರಿoದ ಜ.26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಕಾರ್ಯಕ್ರಮಕ್ಕೆ ಭಾರತ ಸರಕಾರದ ಯುವಜನ ಸೇವೆಯ ಇಲಾಖೆಯ ವತಿಯಿಂದ ಆಹ್ವಾನ ಮಾಡಲಾಗಿದೆ.

ಇವರ ಈ ಆಯ್ಕೆಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪೂಜ್ಯ ಡಾ.ಶರಣಬಸವಪ್ಪ ಅಪ್ಪ, ಚೇರಪರ್ಸನ್ ಪೂಜ್ಯ ಡಾ.ದಾಕ್ಷಾಯಣಿ ಎಸ್.ಅಪ್ಪ, ಪೂಜ್ಯ ಚಿ.ದೊಡ್ಡಪ್ಪ ಅಪ್ಪ, ಕಾರ್ಯದರ್ಶಿಗಳಾದ ಬಸವರಾಜ ದೇಶಮುಖ, ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ದಶರಥ ಮೇತ್ರೆ, ಎನ್.ಎಸ್.ಎಸ್ ಅಧಿಕಾರಿ ಪ್ರೊ.ದಯಾನಂದ ಹೊಡಲ್, ನ್ಯಾಕ್ ಸಂಯೋಜಕ ಡಾ.ಸುನಂದಾ ವಾಂಜರಖೇಡೆ, ಎಲ್ಲಾ ಬೋಧಕ, ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News