ಕಲಬುರಗಿ | ವಿವಿಧ ಉದ್ಯೋಗಗಳಿಗೆ ಆಯ್ಕೆಯಾಗಿ ಸಿಎಂ ಅವರಿಂದ ನೇಮಕಾತಿ ಪತ್ರ ಪಡೆದ ವಿದ್ಯಾರ್ಥಿನಿಯರು

ಕಲಬುರಗಿ : ಬುಧವಾರ ಇಲ್ಲಿನ ಕೆಸಿಟಿ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉದ್ಯೋಗ ಮೇಳದಲ್ಲಿ ಕಲಬುರಗಿಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ರೇಣುಕಾ ಹಾಗೂ ಭಾಗ್ಯಶ್ರೀ ಅವರು ವಿವಿಧ ಕಂಪನಿಗಳಲ್ಲಿ ಉದ್ಯೋಗಕ್ಕೆ ಆಯ್ಕೆಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನೇಮಕಾತಿ ಪತ್ರ ಪಡೆದುಕೊಂಡರು .
ವಿದ್ಯಾರ್ಥಿನಿಯರ ಈ ಸಾಧನೆಗೆ ಹೈದರಾಬಾದ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಂಎಲ್ಸಿ ಶಶೀಲ್ ಜಿ.ನಮೋಶಿ, ಉಪಾಧ್ಯಕ್ಷರಾದ ರಾಜಾ ಭೀಮಳ್ಳಿ, ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಆಡಳಿತ ಮಂಡಳಿಯ ಸದಸ್ಯರು ಮತ್ತು ಸಂಸ್ಥೆಯ ಆಡಳಿತಾಧಿಕಾರಿ ಡಾ.ಸಿ.ಸಿ.ಪಾಟೀಲ್, ಪ್ರಾಚಾರ್ಯರಾದ ಡಾ.ರಾಜೇಂದ್ರ ಕೊಂಡಾ ವಿಭಾಗದ ಮುಖ್ಯಸ್ಥರಾದ ಡಾ.ಮಹೇಶ ಗಂವ್ಹಾರ ಮತ್ತು ಮಹಾವಿದ್ಯಾಲಯದ ಬೋಧಕ- ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ಮಹಾವಿದ್ಯಾಲಯದ ನ್ಯಾಕ್ ಸಂಯೋಜಕರಾದ ಡಾ. ಮೋಹನರಾಜ್ ಪತ್ತಾರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.