ಕಲಬುರಗಿ | ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು : ಡಾ.ಸೈಯದ್ ಸಮೀರ್

Update: 2024-11-26 17:54 GMT

ಕಲಬುರಗಿ : ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಕಲಬುರಗಿ ಪ್ರಾದೇಶಿಕ ಕಚೇರಿಯ ಯೋಜನಾ ಅಭಿಯಂತರ ಡಾ.ಸೈಯದ್ ಸಮೀರ್ ಅವರು ಹೇಳಿದ್ದಾರೆ.

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಪ್ರಾದೇಶಿಕ ಕಚೇರಿಯ ಆಶ್ರಯದಲ್ಲಿ ಇಲ್ಲಿನ ಆದರ್ಶ ನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ''ರಾಷ್ಟ್ರೀಯ ಶಿಕ್ಷಣ ದಿನ ಮತ್ತು ಮಕ್ಕಳ ದಿನಾಚರಣೆ''ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿoದ ಮತ್ತು ಶಿಕ್ಷಕರ ಮಾರ್ಗದರ್ಶನ ಪಡೆಯುತ್ತಾ ತಮ್ಮ ಜ್ಞಾನಾರ್ಜನೆಯನ್ನು ಹೆಚ್ಚಿಸಿಕೊಳ್ಳಬೇಕು. ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ವಿದ್ಯಾರ್ಥಿಗಳು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಕುರಿತಾಗಿ ಹೆಚ್ಚಿನ ಜ್ಞಾನವನ್ನು ಸಂಪಾದಿಸಬೇಕು ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಭಾಲ್ಕಿಯ ಬಿ.ಕೆ.ಐ.ಟಿಯ ಪ್ರಾಧ್ಯಾಪಕ ಡಾ.ರಾಜಶೇಖರ ಮಠಪತಿ ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯ ಮನಸ್ಥಿತಿಯನ್ನು ವೃದ್ಧಿಸಿಕೊಳ್ಳಬೇಕೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಉಪಪ್ರಾಂಶುಪಾಲರಾದ ಪ್ರತಿಮಾ ದೇವೂರ್ ಮಾತನಾಡಿ, ವಿದ್ಯಾರ್ಥಿಗಳು ಈ ತರಹದ ಕಾರ್ಯಕ್ರಮಗಳ ಸದುಪಯೋಗವನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸುರೇಖಾ ಜಗನ್ನಾಥ್, ಲಕ್ಷ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು. ಕೆ.ಎಸ್.ಸಿ.ಎಸ್.ಟಿ ಯ ಪ್ರಾಜೆಕ್ಟ್ ಅಸೋಸಿಯೇಟ್ ವಿಶ್ವ ಪ್ರಸನ್ನ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಗಣ್ಯರಿಗೆ, ಶಿಕ್ಷಕರಿಗೆ ಮತ್ತು ಮಕ್ಕಳಿಗೆ ಧನ್ಯವಾದವನ್ನು ಅರ್ಪಿಸಿದರು.

ಕಾರ್ಯಕ್ರಮದ ಅಂಗವಾಗಿ ಪೋಸ್ಟರ್ ಪ್ರೆಸೆಂಟೇಶನ್ ಸ್ಪರ್ಧೆಯಲ್ಲಿ ಭಾಗವಹಿಸಿ, ವಿಜೇತರಾದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಗಣ್ಯರಿಂದ ಪ್ರಮಾಣಪತ್ರ ವಿತರಣೆಯನ್ನು ಮಾಡಲಾಯಿತು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News