ಕಲಬುರಗಿ | ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ

ಕಲಬುರಗಿ : 2024-25 ರ ಶೈಕ್ಷಣಿಕ ವರ್ಷದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶ್ರೀ ದಾಮೋದರ ರಘೋಜಿ ಕಾಲೇಜಿನ ವಿದ್ಯಾರ್ಥಿಗಳು ಮಾಡಿದ ಸಾಧನೆಗಾಗಿ ವಿದ್ಯಾರ್ಥಿಗಳನ್ನು ಮತ್ತು ಪೋಷಕರಿಗೆ ಗೌರವ ಧನ ನೀಡಿ ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ.ಪೂ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಾದ ಅಶೋಕ ಶಾಸ್ತ್ರಿ ಮಾತನಾಡಿ, ಮಕ್ಕಳ ಸಾಧನೆಯನ್ನು ಶ್ಲಾಘಿಸಿದರು. ಗೌರವ ಅತಿಥಿಗಳಾಗಿ ಆಗಮಿಸಿದ್ದ ಪ್ರವೀಣಕುಮಾರ ಹರಿದಾಸ, ಕಾಲೇಜಿನ ಸಂಸ್ಥಾಪಕರು ಹಾಗೂ ಅಧ್ಯಕ್ಷರಾದ ರಾಮಚಂದ್ರ ಡಿ.ರಘೋಜಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಮೀರಾ ಆರ್ ರಘೋಜಿ, ಕಾಲೇಜಿನ ಆಡಳಿತ ಮಂಡಳಿಯ ಸದಸ್ಯೆ ಮತ್ತು ರಘೋಜಿ ಗ್ರೂಪ್ ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ (ಸಿಇಓ)ಗಳಾದ ಕುಮಾರಿ ನಂದಿನಿ ಆರ್ ರಘೋಜಿ, ಇನ್ನೋರ್ವ ಸದಸ್ಯರಾದ ವಿಷ್ಣು ಚೇತನ್ ಕೇಲೋಜಿ, ಶ್ರೀ ದಾಮೋದರ ರಘೋಜಿ ಶಾಲೆಯ ಪ್ರಾಂಶುಪಾಲರಾದ ಪ್ರಮೋದ ಮಾಳೇಕರ, ದಾಮೋದರ ರಘೋಜಿ ಕಾಲೇಜಿನ ಪ್ರಾಂಶುಪಾಲರಾದ ಮಲ್ಲಿಕಾರ್ಜುನ ಕಿಣ್ಣಿ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಮಡಿವಾಳಪ್ಪ ಪಾಟೀಲ್, ದಾಮೋದರ ರಘೋಜಿ ಕಾಲೇಜಿನ ಆಡಳಿತ ಆಧಿಕಾರಿ(ಎಓ) ಸಚಿನ್ ಕುಮಾರ ಹಂಚಾಟೆ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ಸಿಬ್ಬಂಧಿ ವರ್ಗ ಉಪಸ್ಥಿತರಿದ್ದರು. ರಾಮಲಿಂಗ ಬಿರಾದಾರ ಕಾರ್ಯಕ್ರಮ ನಿರೂಪಿಸಿದರು, ಅಮರನಾಥ ಸೂರ್ಯವಂಶಿ ಸ್ವಾಗತಿಸಿದರು ಮತ್ತು ಪ್ರಕಾಶ ಬಿರಾದಾರ ವಂದಿಸಿದರು.