ಕಲಬುರಗಿ | ಐಎಎಸ್, ಕೆಎಎಸ್ ಪರೀಕ್ಷೆಗಳಿಗೆ ತರಬೇತಿ : ಹೆಸರು ನೋಂದಣಿಗೆ ಸೂಚನೆ
Update: 2025-03-27 19:25 IST

ಸಾಂದರ್ಭಿಕ ಚಿತ್ರ
ಕಲಬುರಗಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕ ಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಆಸಕ್ತರು 2025ರ ಏಪ್ರಿಲ್ 2 ರೊಳಗಾಗಿ ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 0821-2515944 ಗೆ ಸಂಪರ್ಕಿಸಬೇಕೆಂದು ಕರಾಮುವಿ ಕುಲಸಚಿವರು ತಿಳಿಸಿದ್ದಾರೆ.