ಕಲಬುರಗಿ: ಸರ್ವಜ್ಞ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Update: 2024-10-17 12:42 GMT

ಕಲಬುರಗಿ: ನಗರದ ಸರ್ವಜ್ಞ ಮತ್ತು ಜಸ್ಟಿಸ್ ಶಿವರಾಜ ಪಾಟೀಲ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಕಲಬುರಗಿಯಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.

ಈ ವೇಳೆ ಸಂಸ್ಥೆಯ ಸಂಸ್ಥಾಪಕ ಪ್ರೊ. ಚನ್ನಾರಡ್ಡಿ ಪಾಟೀಲ ಅವರು ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರ ಅತ್ಯಂತ ಪ್ರಸಿದ್ಧ ಕೃತಿ ರಾಮಾಯಣವು ವಿಶ್ವದ ಮೊದಲ ಮಹಾಕಾವ್ಯವಾಗಿದೆ. ವಿದ್ಯಾರ್ಥಿಗಳು ಅದನ್ನು ಓದಿ ಅರ್ಥಮಾಡಿಕೊಂಡು ಆದರ್ಶ ಮಾರ್ಗದಲ್ಲಿ ನಡೆದು ಉತ್ತಮವಾದ ಭವಿಷ್ಯ ರೂಪಿಸಿಕೊಳ್ಳಬೇಕು. ಸಂಸ್ಕಾರ-ಸಂಸ್ಕೃತಿ-ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು. ಮಹರ್ಷಿ ವಾಲ್ಮೀಕಿಯವರ ಜೀವನವನ್ನು ಕುರಿತು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಪ್ರಶಾಂತ ಕುಲಕರ್ಣಿ, ವಿನುತಾ ಆರ್.ಬಿ., ಪ್ರಭುಗೌಡ ಸಿದ್ಧಾರೆಡ್ಡಿ, ಕರುಣೇಶ್ ಹಿರೇಮಠ, ಗುರುರಾಜ ಕುಲಕರ್ಣಿ, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News