ಕಲಬುರಗಿ | ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಜಿಲ್ಲಾ ಪ್ರವಾಸ

Update: 2024-12-19 13:29 GMT

ಡಾ.ಶರಣಪ್ರಕಾಶ್‌ ಪಾಟೀಲ್‌

ಕಲಬುರಗಿ : ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಅವರು ಡಿ.19 ರಂದು ತಡರಾತ್ರಿ 1 ಗಂಟೆಗೆ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಹೂಡುವರು.

ಡಿ.20 ಮತ್ತು 21ರಂದು ಸಚಿವರು ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿಯೇ ತಂಗುವರು. ಡಿ.22 ರಂದು ಬೆಳಿಗ್ಗೆ 11.30 ಗಂಟೆಗೆ ಕಲಬುರಗಿ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಡಿ.23 ರಂದು ರಾತ್ರಿ 9.20 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News