ಕಲಬುರಗಿ | ಅಕ್ರಮ ಮದ್ಯ ಮಾರಾಟ ತಡೆಯಲು ಮಹಿಳೆಯರ ಒತ್ತಾಯ
ಕಲಬುರಗಿ : ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಗ್ರಾಮದಲ್ಲಿ ಹೆಚ್ಚಾದ ಅಕ್ರಮ ಮದ್ಯ ಮಾರಾಟವನ್ನು ತಡೆಯುವಂತೆ ಗ್ರಾಮದ ಮಹಿಳೆಯರು ಒತ್ತಾಯಿಸಿದ್ದಾರೆ.
ಮರಗುತ್ತಿ ಗ್ರಾಮದಲ್ಲಿ ಅಕ್ರಮವಾಗಿ, ಪರವಾನಿಗೆ ಇಲ್ಲದೆ ಗ್ರಾಮದ ಪ್ರಮುಖ ಜಾಗಗಳಲ್ಲಿ ಮತ್ತು ಗೂಡಂಗಡಿಗಳಲ್ಲಿ ಹಗಲು ರಾತ್ರಿ ನಿರಂತರವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಗ್ರಾಮದ ಮಹಿಳೆಯರು ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಿದರು.
ಎಲ್ಲೆಂದರಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದರಿಂದ ಮದ್ಯವೆಸನಿಗಳ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಅನೇಕ ಕುಟುಂಬಗಳು ಬೀದಿಗೆ ಬಂದಿವೆ. ಈ ಕುರಿತು ತಹಶೀಲ್ದಾರ್ ಹಾಗೂ ಸಂಭಂದಿಸಿದ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ವಯಸ್ಸಾದ ಪುರಷರಲ್ಲದೆ, ನಮ್ಮ ಮಕ್ಕಳು ಕೂಡ ಮಧ್ಯಕ್ಕೆ ದಾಸರಾಗುತ್ತಿದ್ದು, ಇದರಿಂದ ನಮ್ಮ ಕುಟುಂಬ ಬೀದಿ ಪಾಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಗ್ರಾಮದಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ನಿಲ್ಲಿಸಿ, ಕುಡಿತದಿಂದ ಹಾಳಾಗುತ್ತಿರುವ ನಮ್ಮ ಕುಟುಂಬಗಳನ್ನು ರಕ್ಷಣೆ ಮಾಡಬೇಕೆಂದು ಮನವಿ ಮಾಡಿದರು.