ಕಲಬುರಗಿ | ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ

ಕಲಬುರಗಿ : ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಖಾಯಂ ಸಂಚಾರಿ ಪೀಠ-ಕಲಬುರಗಿ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಶಾರದಾ ವಿವೇಕ ಮಹಿಳಾ ಪದವಿ ಮಹಾವಿದ್ಯಾಲಯ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಕಲಬುರಗಿ ಆಳಂದ ರಸ್ತೆಯ ಶಾರದಾ ವಿವೇಕ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಶುಕ್ರವಾರ ʼವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆʼಯನ್ನು ಹಮ್ಮಿಕೊಳ್ಳಲಾಯಿತು.
ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಲಬುರಗಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ (ಪ್ರಭಾರಿ) ಅಧ್ಯಕ್ಷರಾದ ಲೋಕೇಶ ಎಂ. ಅವರು, ಗ್ರಾಹಕರ ದಿನನಿತ್ಯ ವಸ್ತುಗಳನ್ನು ಖರೀದಿಸಿದ ನಂತರ ಕಡ್ಡಾಯವಾಗಿ ರಶೀದಿ ಪಡೆಯಬೇಕು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ವಕೀಲರ ಸಂಘ ಅಧ್ಯಕ್ಷ ಗುಪ್ತಲಿಂಗ ಪಾಟೀಲ ಅವರು ಮಾತನಾಡಿ, ಗ್ರಾಹಕರು ದಿನನಿತ್ಯ ವಸ್ತುಗಳನ್ನು ಖರೀದಿಸಿದ ನಂತರ ಕಡ್ಡಾಯವಾಗಿ ರಶೀದಿ ಪಡೆಯಬೇಕು. ವಸ್ತುವಿನ ನ್ಯೂನ್ಯತೆ ಕಂಡು ಬಂದಲ್ಲಿ ತಕ್ಷಣ ಗ್ರಾಹಕರ ಆಯೋಗಕ್ಕೆ ಬಂದು ದೂರು ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ವಕೀಲರು ಹಾಗೂ ಮಹಾತ್ಮ ಗಾಂಧೀಜಿ ಗ್ರಾಹಕರ ಹಿತರಕ್ಷಣಾ ವೇದಿಕೆಯ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಗ್ರಾಹಕರ ಪರಿಷತ್ತಿನ ಸದಸ್ಯರಾದ ವೈಜಿನಾಥ ಝಳಕಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಗ್ರಾಹಕ ಹಿತರಕ್ಷಣಾ ಕಾನೂನಿನ ಅರಿವು ಅಗತ್ಯವಾಗಿದೆ. ಗ್ರಾಹಕರ ಕಾಯ್ದೆಯ ಬಗ್ಗೆ ಹಾಗೂ ಮತ್ತು ಜಿಲ್ಲಾ ಗ್ರಾಹಕರ ಆಯೋಗದಲ್ಲಿನ ಆದ ತೀರ್ಪುಗಳನ್ನು ಉದಾಹರಣೆಯೊಂದಿಗೆ ವಿವರಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಲಬುರಗಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಸದಸ್ಯರು ಹಾಗೂ ಬೀದರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ (ಪ್ರಭಾರಿ) ಅಧ್ಯಕ್ಷ ತ್ರಿಯಂಬಕೇಶ್ವರ ಎಮ್ ಸ್ವಾಮಿ, ಕಲಬುರಗಿ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕಿ ರೇಖಾ ಟಿ., ಶಿರೆಸ್ತೇದಾರರಾದ ಅಲ್ಲಾಭಕ್ಷ, ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಖಾಯಂ ಸಂಚಾರಿ ಪೀಠ-ಕಲಬುರಗಿ ಮತ್ತು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟ್ರಾರ್ ಹಾಗೂ ಸಹಾಯಕ ಆಡಳಿತಾಧಿಕಾರಿಗಳಾದ ಮಲ್ಲಿಕಾರ್ಜುನ ಬಿ. ಒಡೆಯರು ಉಪಸ್ಥಿತರಿದ್ದರು.
ಕಲಬುರಗಿ ಶಾರದಾ ವಿವೇಕ ಮಹಿಳಾ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಭಾಗಿರಥಿ.ಬಿ.ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಕಾರ್ಯಕ್ರಮದಲ್ಲಿ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಖಾಯಂ ಸಂಚಾರಿ ಪೀಠ-ಕಲಬುರಗಿ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಲಬುರಗಿ ಮತ್ತು ಶಾರದಾ ವಿವೇಕ ಮಹಿಳಾ ಪದವಿ ಮಹಾವಿದ್ಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು. ರವಿ ಬಿರಾದಾರ ಕಾರ್ಯಕ್ರಮ ನಿರೂಪಿಸಿದರು. ಆಡಳಿತ ಅಧಿಕಾರಿ ಹನುಮಂತ ಕೆ. ವಂದಿಸಿದರು.