ಕಲಬುರಗಿ | ಯುವನಿಧಿ ಫಲಾನುಭವಿಗಳು ನಿರುದ್ಯೋಗಿ ಎಂದು ಸ್ವಯಂ ಘೋಷಣೆ ಮಾಡಿಕೊಳ್ಳಲು ಸೂಚನೆ

ಕಲಬುರಗಿ : ಯುವನಿಧಿ ಯೋಜನೆಯಡಿ ಪದವಿ ಮತ್ತು ಸ್ನಾತಕೋತರ ಪದವಿ ಹಾಗೂ ಡಿಪ್ಲೋಮಾವನ್ನು 2022-23ನೇ ಹಾಗೂ 2023-2024ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023/24 ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್‍ನಲ್ಲಿ ನೋಂದಣಿ ಮಾಡಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳ ಪೂರೈಸಿದ ನಂತರ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯಕಚೇರಿಯ ಸಹಯಕ ನಿರ್ದೇಶಕರು ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು ಯುವನಿಧಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ, ಪ್ರತಿ ತಿಂಗಳ ಬದಲಾಗಿ ಇನ್ನು ಮುಂದೆ “ಪ್ರತಿ ಮೂರು ತಿಂಗಳಿಗೊಮ್ಮೆ” (ತ್ರೈಮಾಸಿಕ)ತಾನು ನಿರುದ್ಯೋಗಿಯೆಂದು ಮತ್ತು ವ್ಯಾಸಂಗವನ್ನು ಮುಂದುವರೆಸುತ್ತಿಲ್ಲವೆಂದು, ಸ್ವಯಂ ಘೋಷಣೆಯನ್ನು ಮಾಡಬೇಕು. ಅಭ್ಯರ್ಥಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ.
ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. https://sevasindhugs.karnataka.gov.in ವೆಬ್‍ಸೈಟ್‍ನಲ್ಲಿ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು. ಉಳಿದಂತೆ ಸೇವಾ ಸಿಂಧು ಪೋರ್ಟಲ್‍ನಲ್ಲಿ ತಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಸಿಕೊಂಡು, ಒಂದು ವೇಳೆ ಅರ್ಜಿ ಅಪ್ರೂವ್ ಆಗದ ಸಂದರ್ಭದಲ್ಲಿ ಸೂಚಿಸಲ್ಪಟ್ಟ ಇಲಾಖೆಯ ಕಛೇರಿಗಳಿಗೆ ತಮ್ಮ ಎಲ್ಲಾ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣ ಪತ್ರಗಳೊಂದಿಗೆ ಖುದ್ದಾಗಿ ಬೇಟಿ ನೀಡಿ ಅವುಗಳ ಜೀರಾಕ್ಸ್ ಪ್ರತಿಗಳನ್ನು ಸಲ್ಲಿಸಿ ಅಪ್ರೂವ್ ಮಾಡಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ಕೋರಲಾಗಿದೆ.