ದಕ್ಷಿಣ ಭಾರತ ಅಂತರ್ ವಿವಿ ಕ್ರಿಕೆಟ್ ಗೆ ಕಾಂಬ್ಳೆ ಆಯ್ಕೆ

Update: 2025-01-09 12:34 GMT

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ.ಎಸ್. ಇರಾಣಿ ಕಾಲೇಜಿನ ವಿದ್ಯಾರ್ಥಿ ಶಶಿಕುಮಾರ ಕಾಂಬ್ಳೆ ಕ್ರಿಕೆಟ್ ನಲ್ಲಿ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

ಇದೇ ತಿಂಗಳು ಜ. 16 ರಿಂದ 21ರವರೆಗೆ ಮದ್ರಾಸ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯಗಳ ಮಟ್ಟದ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಆಯ್ಕೆಯಾಗಿ ಗುಲ್ಬರ್ಗಾ ವಿಶ್ವವಿದ್ಯಾಲಯ ಪ್ರತಿನಿಧಿಸಲಿದ್ದಾರೆ. ಈ ಹೆಮ್ಮೆಯ ಸಾಧನೆ ಮಾಡಿ ಸಂಸ್ಥೆಗೆ ಹಾಗೂ ಕಾಲೇಜಿಗೆ ಹೆಸರು ತಂದಿರುವ ಇವರನ್ನು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಉಪಾಧ್ಯಕ್ಷ ರಾಜಾ ಭಿ ಭೀಮಳ್ಳಿ, ಕಾರ್ಯದರ್ಶಿ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿ ಡಾ.ಕೈಲಾಸ ಪಾಟೀಲ್ ಹಾಗೂ ಕಾಲೇಜಿನ ಸಂಚಾಲಕರು ಹಾಗೂ ಆಡಳಿತ ಮಂಡಳಿ ಸದಸ್ಯರಾದ ನಾಗಣ್ಣ ಘಂಟಿ ಹಾಗೂ ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಚಾರ್ಯರಾದ ಪ್ರೊ.ರೋಹಿಣಿಕುಮಾರ್ ಹಿಳ್ಳಿ, ಕ್ರೀಡಾ ನಿರ್ದೇಶಕರಾದ ಡಾ.ಶಂಕ್ರಪ್ಪ ಕಲಬುರ್ಗಿ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News