ಕಲಬುರಗಿ: ಅ.23ರಂದು ಕಿತ್ತೂರ ರಾಣಿ ಚನ್ನಮ್ಮ ಜಯಂತಿ ಆಚರಣೆ

Update: 2024-10-17 12:48 GMT

ಕಲಬುರಗಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಅಕ್ಟೋಬರ 23 ರಂದು ಬೆಳಗ್ಗೆ 11 ಗಂಟೆಗೆ ಕಿತ್ತೂರ ರಾಣಿ ಚನ್ನಮ್ಮ ಜಯಂತಿಯನ್ನು ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ತಿಳಿಸಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ವಿಜೃಂಭಣೆಯಿಂದ ಆಚರಿಸೋಣ ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸೂಚಿಸಿದರು. ಎಲ್ಲಾ ಜಿಲ್ಲಾ ಮತ್ತು ತಾಲೂಕು ಸರಕಾರಿ, ಅರೆ ಸರಕಾರಿ, ಕಚೇರಿಗಳಲ್ಲಿ ಹಾಗೂ ಸರಕಾರಿ ಶಾಲಾ ಕಾಲೇಜುಗಳಲ್ಲಿ ಹಾಗೂ ಅನುದಾನ ಶಾಲಾ ಕಾಲೇಜುಗಳಲ್ಲಿ ಬೆಳಿಗ್ಗೆ 9 ಗಂಟೆಗೆ ಕಡ್ಡಾಯವಾಗಿ ಜಯಂತಿಯನ್ನು ಆಚರಿಸಲು ತಿಳಿಸಿದರು. ಭಾವಚಿತ್ರಕ್ಕೆ ಮಾಲಾರ್ಪಣೆ ಹೂದಾನಿಗಳಿಂದ ಆಲಂಕ ರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು. ಕುಡಿಯುವ ನೀರು, ಸ್ವಚ್ಛತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಯಂತೋತ್ಸವ ಸಮಿತಿ ಅಧ್ಯಕ್ಷತೆಗೆ ಜ್ಯೋತಿ ಎಂ. ಮರಗೋಳ ಆಯ್ಕೆಮಾಡಲಾಯಿತು. ಉಪನ್ಯಾಸಕರನ್ನಾಗಿ ಡಾ.ಮೀನಾಕ್ಷಿ ಬಾಳಿ ಅವರನ್ನು ಆಯ್ಕೆಮಾಡಲಾಯಿತು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News