ಕಲಬುರಗಿ | ವಿವಿಧ ಕೋರ್ಸ್‍ಗಳಿಗೆ ದಂಡ ಶುಲ್ಕವಿಲ್ಲದೇ ಪ್ರವೇಶ ಪಡೆಯಲು ಮಾ.31 ರಂದು ಕೊನೆಯ ದಿನ

Update: 2025-03-25 18:20 IST
ಕಲಬುರಗಿ | ವಿವಿಧ ಕೋರ್ಸ್‍ಗಳಿಗೆ ದಂಡ ಶುಲ್ಕವಿಲ್ಲದೇ ಪ್ರವೇಶ ಪಡೆಯಲು ಮಾ.31 ರಂದು ಕೊನೆಯ ದಿನ
  • whatsapp icon

ಕಲಬುರಗಿ : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 2024-25ನೇ ಸಾಲಿನ (ಜನವರಿ ಆವೃತ್ತಿಯ) ಈ ಕೆಳಕಂಡ ವಿವಿಧ ಕೋರ್ಸ್‍ಗಳಿಗೆ ಅರ್ಹ ವಿದ್ಯಾರ್ಥಿಗಳು ದಂಡ ಶುಲ್ಕವಿಲ್ಲದೇ ಪ್ರವೇಶ ಪಡೆಯಲು ಮಾ.31 ಕೊನೆಯ ದಿನವಾಗಿದೆ ಎಂದು ಕಲಬುರಗಿ ಪ್ರಾದೇಶಿಕ ಕೇಂದ್ರದ ನಿರ್ದೇಶಕರು ತಿಳಿಸಿದ್ದಾರೆ.

ಪ್ರಥಮ ಬಿ.ಎ., ಬಿ.ಕಾಂ., ಬಿಎಲ್‍ಐಎಸ್‍ಸಿ, ಬಿ.ಎಸ್.ಸಿ., ಬಿ.ಬಿ.ಎ., ಬಿ.ಸಿ.ಎ. ಹಾಗೂ ಪ್ರಥಮ ಎಂ.ಎ. ಕನ್ನಡ, ಇಂಗ್ಲೀಷ್‌, ಹಿಂದಿ, ಉರ್ದು, ಇತಿಹಾಸ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸಾರ್ವಜನಿಕ ಆಡಳಿತ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ, ಎಂ.ಕಾಂ., ಎಂ.ಬಿ.ಎ., ಎಂಎಲ್‍ಐಎಸ್‍ಸಿ, ಎಂ.ಎಸ್.ಸಿ., ಎಂ.ಎಸ್.ಡಬ್ಲ್ಯೂ, ಬಿ.ಎಸ್.ಡಬ್ಲ್ಯೂ., ಎಂ.ಸಿ.ಎ. ಹಾಗೂ ಡಿಪ್ಲೋಮಾ ಕೋರ್ಸ್‍ಗಳಿಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ.10ರಷ್ಟು ವಿನಾಯಿತಿ ನೀಡಲಾಗಿದೆ. ದಂಡ ಶುಲ್ಕವಿಲ್ಲದೇ ಪ್ರವೇಶ ಪಡೆಯಲು 2025ರ ಮಾ.31 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಕೇಂದ್ರ, ಕನ್ನಡ ಅಧ್ಯಯನ ಸಂಸ್ಥೆ, ಗುಲಬರ್ಗಾ ವಿಶ್ವವಿದ್ಯಾಲಯ ಆವರಣ ಕಲಬುರಗಿ ಕಚೇರಿಯನ್ನು ಹಾಗೂ ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ಡಾ. ಸಂಗಮೇಶ ಹಿರೇಮಠ ಇವರ ಮೊಬೈಲ್ ಸಂಖ್ಯೆ 9916783555 ಹಾಗೂ ವಿಶ್ವವಿದ್ಯಾಲಯದ www.ksoumysuru.ac.in ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News