ಕಲಬುರಗಿ | ʼಮಕ್ಕಳ ಕೈಯಲ್ಲಿ ಪೆನ್ ಬದಲು ತಲ್ವಾರ್ ಕೊಡಿʼ : ಪ್ರಚೋದನಾಕಾರಿ ಹೇಳಿಕೆ ನೀಡಿದ ಮರುಳಾರಾಧ್ಯ ಶಿವಾಚಾರ್ಯ
Update: 2024-11-11 10:42 GMT
ಕಲಬುರಗಿ : ʼಮಕ್ಕಳ ಕೈಯಲ್ಲಿ ಪೆನ್ ಕೊಡುವ ಬದಲು ಇನ್ಮುಂದೆ ತಲ್ವಾರ್ ಕೊಡಿʼ ಎಂದು ಮಾಶಾಳದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.
ಅಫಜಲಪುರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರವಿವಾರ ನಡೆದ ʼವಕ್ಫ್ ಹಠಾವೋ ದೇಶ ಬಚಾವೋʼ ಪ್ರತಿಭಟನೆಯಲ್ಲಿ ಮಾತನಾಡಿದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ, "ಎಲ್ಲಾ ಯುವಕರ ಮನೆಯಲ್ಲಿ ತಲ್ವಾರ್‌ಗಳಿವೆ. ಯಾರೂ ಬರುತ್ತಾರೆ ಅವರನ್ನು ಕಡಿಯುತ್ತೇವೆ. ಇನ್ಮುಂದೆ ನಾವು ಮಕ್ಕಳ ಕೈಯಲ್ಲಿ ಪೆನ್ನು ಕೊಡುವುದರ ಬದಲು ತಲ್ವಾರ್ ಕೊಡಬೇಕಾಗುತ್ತದೆ" ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
"ವಕ್ಫ್ ಕಾಯ್ದೆ ರದ್ದಾಗದಿದ್ದರೆ ಜೀವ ತೆಗೆಯಲು ಮತ್ತು ಜೀವ ಕೊಡಲು ಸಿದ್ಧರಿದ್ದೇವೆ. ಕಲಬುರಗಿ ಜಿಲ್ಲೆಯಲ್ಲಿ 27 ಸಾವಿರ ಎಕರೆ ವಕ್ಫ್ ಆಸ್ತಿ ಇದೆ. ಭಾರತವನ್ನು ಪಾಕಿಸ್ತಾನ ಮಾಡುತ್ತೇವೆ ಎನ್ನುತ್ತಿದ್ದಾರೆ. ನೀವೇನಾದರೂ ಎಚ್ಚೆತ್ತುಕೊಳ್ಳದಿದ್ದರೆ ಭಾರತ ದೇಶವೇ ಇರಲ್ಲ" ಎಂದು ಹೇಳಿದ್ದಾರೆ.