ʼಮಿಸ್ಟರ್‌ ಬಾಂಡ್ ಗೆ ಆತ್ಮೀಯ ಸ್ವಾಗತʼ ಎನ್ನುತ್ತಾ ಪ್ರಧಾನಿ ಮೋದಿಗೆ ಸರಣಿ ಪ್ರಶ್ನೆಗಳನ್ನು ಕೇಳಿದ ಸಚಿವ ಪ್ರಿಯಾಂಕ್‌ ಖರ್ಗೆ

Update: 2024-03-16 10:21 GMT

ಕಲಬುರಗಿ: ʼಮಿಸ್ಟರ್‌ ಬಾಂಡ್ ಗೆ ಆತ್ಮೀಯ ಸ್ವಾಗತʼ ಎಂದು ಕಲಬುರಗಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗ್ರಾಮಾಭಿವೃದ್ದಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸ್ವಾಗತಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಕಲಬುರಗಿಯಿಂದ ಪ್ರಚಾರ ಆರಂಭಿಸಲು ನಗರಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಸಾರ್ವಜನಿಕರ ಪರ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

1) ನರೇಗಾ ಯೋಜನೆಯಡಿಯಲ್ಲಿ ಕೆಲಸ ಮಾಡಿದ ಕಾರ್ಮಿಕರಿಗೆ ಕೇಂದ್ರ ಸರ್ಕಾರ ವೇತನ ಯಾಕೆ ಬಿಡುಗಡೆ ಮಾಡುತ್ತಿಲ್ಲ ? ಮೋದಿ ಸರ್ಕಾರ ದಿವಾಳಿಯಾಗಿದೆಯೇ?

2) ಕರ್ನಾಟಕ ತೀವ್ರ ಬರಗಾಲ ಎದುರಿಸುತ್ತಿದ್ದರೂ ಕೂಡಾ ಮೋದಿ ಸರ್ಕಾರ ಎನ್ ಡಿ ಆರ್ ಎಫ್ ಅಡಿಯಲ್ಲಿ ಯಾಕೆ ಅನುದಾನ ಬಿಡುಗಡೆ ಮಾಡುತ್ತಿಲ್ಲ?

3) ಕಳೆದ ಚುನಾವಣೆಯಲ್ಲಿ ಬಿಜೆಪಿ ಭರವಸೆ ನೀಡಿರುವಂತೆ, ಕೋಲಿ ಮತ್ತು ಗೊಂಡ ಕುರುಬ ಸಮುದಾಯಗಳನ್ನು ಯಾವಾಗ ಪರಿಶಿಷ್ಟ ಪಂಗಡ (ಎಸ್ ಟಿ) ಗೆ ಸೇರಿಸುತ್ತೀರಿ?

4) ಮಲ್ಲಿಕಾರ್ಜುನ ಖರ್ಗೆ ಅವರ ಅವಧಿಯಲ್ಲಿ ಮಂಜೂರಾಗಿದ್ದ ಕಲಬುರಗಿ ರೈಲ್ವೆ ವಲಯವನ್ನು ನಿಮ್ಮ ಸರ್ಕಾರ ಯಾಕೆ ಸ್ಥಾಪಿಸಲಿಲ್ಲ?

5) ಕಲಬುರಗಿಗೆ ಬರಬೇಕಿದ್ದ ನಿಮ್ಝ್ ಯೋಜನೆಯನ್ನು ಯಾಕೆ ಸ್ಥಾಪಿಸಲಿಲ್ಲ?

6) ಕಲಬುರಗಿ ಹೊರ ವರ್ತುಲ ರಸ್ತೆಗೆ ಯಾಕೆ ಅನುದಾನ ಬಿಡುಗಡೆ ಮಾಡಲಿಲ್ಲ?

ಮೋದಿ ಮೋಸ ಎಂಬ ಹ್ಯಾಶ್‌ ಟ್ಯಾಗ್‌ ಬಳಸಿ ಈ ಎಲ್ಲ ಪ್ರಶ್ನೆಗಳನ್ನು ಕೇಳಿರುವ ಸಚಿವ ಪ್ರಿಯಾಂಕ್‌ ಖರ್ಗೆ ಅವರು, ಪ್ರಧಾನಿ ಮೋದಿ ಅವರು ಸಮರ್ಪಕ ಉತ್ತರ ನೀಡಬೇಕೆಂದು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News