ಕಲಬುರಗಿ ನಗರವನ್ನು ಸ್ಮಾರ್ಟ್‌ ಸಿಟಿಯಾಗಿ ರೂಪಿಸಲು ಜನಪ್ರತಿನಿಧಿ, ಅಧಿಕಾರಿಗಳೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ

Update: 2025-04-01 19:21 IST
Photo of Metting
  • whatsapp icon

ಕಲಬುರಗಿ : ಕಲಬುರಗಿ ನಗರವನ್ನು ನಾಗರಿಕ ಸ್ನೇಹಿಯಾಗಿಸಲು, ಸ್ಮಾರ್ಟ್‌ ಸಿಟಿಯಾಗಿ ರೂಪಿಸುವ ಸಲುವಾಗಿ ಯೋಜನೆಗಳನ್ನು ಹಮ್ಮಿಕೊಳ್ಳಲು ಪೂರ್ವಭಾವಿಯಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಶಾಸಕರು, ಅಧಿಕಾರಿಗಳು ಹಾಗೂ ಸಂಸ್ಥೆಗಳೊಂದಿಗೆ ಚರ್ಚೆ ನಡೆಸಿದರು.

ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಹಾಗೂ ಇತರೆ ಅಧಿಕಾರಿಗಳೊಂದಿಗೆ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಚರ್ಚೆ ನಡೆಸಿದ ಸಚಿವರು, ನಗರದ ಸಮಗ್ರ ಅಭಿವೃದ್ಧಿಗೆ ಪೂರಕವಾಗುವಂತೆ ಕಾರ್ಯಕ್ರಮಗಳನ್ನು ರೂಪಿಸುವ ನಿಟ್ಟಿನಲ್ಲಿ ಹಲವಾರು ಸಲಹೆ, ಸೂಚನೆಗಳನ್ನು ನೀಡಿದರು.

ಇದೇ ಸಂದರ್ಭದಲ್ಲಿ ವಿಡಿಯೋ ಸಂವಾದದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ್‌ ಹಾಗೂ ಕನಿಝಾ ಫಾತಿಮಾ ಹಾಗೂ ಕಲಬುರಗಿ ನಗರ ಪಾಲಿಕೆಯ ಆಯುಕ್ತರು, ನಗರ ಯೋಜನಾ ಸಂಸ್ಥೆಯಾದ ಐಐಹೆಚ್‌ಎಸ್‌ ಪ್ರತಿನಿಧಿಗಳು ಭಾಗವಹಿಸಿದ್ದರು.

ನಗರಕ್ಕೆ ಸುಸ್ಥಿರ ನೀರು ಸರಬರಾಜು, ಉತ್ತಮ ರಸ್ತೆ, ಉದ್ಯಾನವನ, ತ್ಯಾಜ್ಯ ಮರುಬಳಕೆ, ತ್ಯಾಜ್ಯ ವಿಲೇವಾರಿ, ಸುಗಮ ವಾಹನ ಸಂಚಾರ, ಆಕರ್ಷಕ ಹಾಗೂ ಅನುಕೂಲಕರ ಬಸ್‌ ತಂಗುದಾಣಗಳ ನಿರ್ಮಾಣ ಮುಂತಾದ ಮೂಲಭೂತ ಸೌಲಭ್ಯಗಳನ್ನು ಉತ್ತಮ ಪಡಿಸಿ ಕಲಬುರಗಿ ನಗರವನ್ನು ಸ್ಮಾರ್ಟ್‌ ಸಿಟಿಯನ್ನಾಗಿ ಪರಿವರ್ತನೆ ಮಾಡುವ ಗುರಿ ಹೊಂದಲಾಗಿದೆ ಎಂದು ಸಚಿವರು ತಿಳಿಸಿದರು.

ನಗರ ಯೋಜನೆಯನ್ನು ರೂಪಿಸುವಲ್ಲಿ ಪರಿಣಿತ ಸಲಹಾ ಸಂಸ್ಥೆಯಾದ ಇಂಡಿಯನ್‌ ಇನ್ಸಿಟ್ಯೂಟ್‌ ಆಫ್‌ ಹ್ಯೂಮನ್‌ ಸೆಟಲ್ಮೆಂಟ್‌ ಸಂಸ್ಥೆಯು ಸ್ಥಳೀಯ ಶಾಸಕರು ಹಾಗೂ ನಗರಸಭೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕಲಬುರಗಿ ನಗರದ ಉತನ್ನತೀಕರಣಕ್ಕೆ ಸಂಬಂಧಿಸಿದಂತೆ ವಿವರಗಳನ್ನು ಒಳಗೊಂಡ ವರದಿಯನ್ನು ಐದು ದಿನಗಳ ಒಳಗಾಗಿ ಸಲ್ಲಿಸಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News