ನಾರಾಯಣ ಗುರು ಅಧ್ಯಯನ ಪೀಠ ಸ್ಥಾಪಿಸಲು ಸಚಿವ ಡಾ.ಎಂ.ಸಿ.ಸುಧಾಕರ್‌ಗೆ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ

Update: 2025-01-16 14:28 GMT

ಕಲಬುರಗಿ: ಇಲ್ಲಿನ ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಶ್ರೀ ನಾರಾಯಣ ಗುರುಗಳ ಅಧ್ಯಯನ ಪೀಠ ಸ್ಥಾಪಿಸಲು ಮಂಜೂರಾತಿ ಹಾಗೂ ಅಗತ್ಯವಿರುವ ಆರ್ಥಿಕ ನೆರವು ನೀಡುವ ಕುರಿತು ಅಗತ್ಯ ಕ್ರಮವಹಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಪತ್ರ ಬರೆದು ಕೋರಿದ್ದಾರೆ.

ವಿವಿಯಲ್ಲಿ ಶ್ರೀ ನಾರಾಯಣ ಗುರುಗಳ ಅಧ್ಯಯನ ಪೀಠ ಸ್ಥಾಪನೆ ಕುರಿತಂತೆ ವಿವಿಯ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಹಾಗೂ ಪ್ರಾದ್ಯಾಪಕ ಡಾ.ಎಚ್.ಟಿ ಪೋತೆ ಅವರು ಪ್ರಸ್ತಾವನೆಯ ಪರಿಶೀಲನಾ ವರದಿಯೊಂದನ್ನು ಸಿದ್ದಪಡಿಸಿದ್ದು, ಪೀಠ ಸ್ಥಾಪನೆಗೆ ಮಂಜೂರಾತಿ ಹಾಗೂ ಸರಕಾರದ ಅಗತ್ಯ ಆರ್ಥಿಕ ನೆರವು ನೀಡುವಂತೆ ವಿವಿಯ ಕುಲಸಚಿವರು ಪ್ರಸ್ತಾವನೆ ಸಲ್ಲಿಸಿರುತ್ತಾರೆ.

ಆದರೆ ಇದೂವರೆಗೆ ಅಧ್ಯಯನ ಪೀಠ ಸ್ಥಾಪನೆ ಸಂಬಂಧ ಮಂಜೂರಾತಿ ಅಥವಾ ಸರಕಾರದಿಂದ ಆರ್ಥಿಕ ನೆರವು ಮಂಜೂರಾಗಿರುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸುತ್ತಾ ಅಗತ್ಯ ಕ್ರಮವಹಿಸುವಂತೆ ಉನ್ನತ ಶಿಕ್ಷಣ ಸಚಿವರಿಗೆ ಪ್ರಿಯಾಂಕ್ ಖರ್ಗೆ ಕೋರಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News