ಕಲಬುರಗಿ | ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ
Update: 2025-04-15 19:22 IST

ಕಲಬುರಗಿ : ಇಲ್ಲಿನ ಜಿಮ್ಸ್ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ವೀಕ್ಷಿಸಿದರು.
ನಾಳೆ(ಎ.16) ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸಭಾ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ಈ ನಿಮಿತ್ತ ಸಚಿವರು ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಕೆಕೆಆರ್ ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕ ಅಲ್ಲಮ ಪ್ರಭು ಪಾಟೀಲ್ ಸೇರಿದರೆ ಇತರರು ಇದ್ದರು.