ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾದ ವಕ್ಫ್ ಬೋರ್ಡ್ ನೂತನ ಅಧ್ಯಕ್ಷ
Update: 2025-03-26 20:06 IST

ಕಲಬುರಗಿ : ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಫೀಜ್ ಸೈಯದ್ ಮುಹಮ್ಮದ್ ಅಲಿ ಅಲ್-ಹುಸೈನಿ ಅವರು ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಬುಧವಾರ ನವದೆಹಲಿಯಲ್ಲಿ ಭೇಟಿಯಾಗಿ ಅಭಿನಂದಿಸಿದರು.
ರಂದೀಪ್ ಸಿಂಗ್ ಸುರ್ಜೆವಾಲಾ ಅವರೊಂದಿಗೆ ಭೇಟಿ ನೀಡಿದ ಬಳಿಕ, ಸಮುದಾಯ ಅಭಿವೃದ್ಧಿ, ಕರ್ನಾಟಕ ಮಂಡಳಿಯ ಬಲಪಡಿಸುವುದು ಮತ್ತು ಶೈಕ್ಷಣಿಕ ಕಾರ್ಯಕ್ರಮಗಳ ಆರಂಭದ ಕುರಿತು ಖರ್ಗೆ ಅವರೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಖಾಜಾ ಬಂದಾ ಜವಾಜ್ ವಿಶ್ವ ವಿದ್ಯಾಲಯದ ನಿರ್ದೆಶಕರಾದ ಸೈಯದ್ ಮಸ್ತಫಾ ಅಲಿ ಹುಸೈನಿ ಜೊತೆಗೆ ಇದ್ದರು.