ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಬಿಜೆಪಿಗೆ ಅಪಥ್ಯ : ಸಚಿವ ಪ್ರಿಯಾಂಕ್ ಖರ್ಗೆ

Update: 2024-04-22 17:50 GMT

ಕಲಬುರಗಿ : ರಾಜ್ಯ ಸರ್ಕಾರ ಜನ ಪರ ಐದು ಗ್ಯಾರಂಟಿ ಯೋಜನೆಗಳು ಬಿಜೆಪಿಯವರಿಗೆ ಅಪಥ್ಯವಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ಸುಂದರ ನಗರದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರವಾಗಿ ಮತಯಾಚನೆ ಮಾಡಿ ಅವರು ಮಾತನಾಡುತ್ತಿದ್ದರು.

ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಬಿಜೆಪಿ ಆ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎಂದು ಮೂದಲಿಸುತ್ತಿದೆ. ಅವರಿಗೆ ಜನರು ಆರ್ಥಿಕ ಹಾಗೂ ಸಾಮಾಜಿಕವಾಗಿ ಅಭಿವೃದ್ದಿ ಹೊಂದುವುದು ಬೇಕಿಲ್ಲ. ಯಾವುದೇ ಅಭಿವೃದ್ದಿ‌ ಮಾಡದ ಉಮೇಶ್ ಜಾಧವ್ ಅವರು ಈ ಸಲ ಚುನಾವಣೆ ನಿಂತಿದ್ದಾರೆ. ಅವರ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ನಿಂತಿದ್ದಾರೆ. ಕಲಬುರಗಿ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

ವೇದಿಕೆಯ ಮೇಲೆ ಡಿಸಿಸಿ ಅಧ್ಯಕ್ಷರಾದ ಜಗದೇವ ಗುತ್ತೇದಾರ, ಸಚಿವರಾದ ಶರಣಪ್ರಕಾಶ ಪಾಟೀಲ್, ರಹೀಂ ಖಾನ್, ಶಾಸಕರಾದ ಅಲ್ಲಮಪ್ರಭು, ಅರವಿಂದ ಅರಳಿ. ಪಾಟೀಲ, ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ನೀಲಕಂಠ ಮೂಲಗೆ, ಬಾಬು ಒಂಟಿ, ಸಂತೋಷ ಗೌಡ, ಡಾ ಕಿರಣ್ ದೇಶಮುಖ, ಪ್ರವೀಣ್ ಹರವಾಳ‌, ಶಿವಕುಮಾರ ಹೊನಗುಂಟಿ, ಈರಣ್ಣ ಝಳಕಿ ಸೇರಿದಂತೆ ಹಲವರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News