ಪರಿಷತ್ ಚುನಾವಣೆ | ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ್ ಪಾಟೀಲ್ ಗೆಲುವು
Update: 2024-06-07 13:07 IST

ಕಲಬುರಗಿ : ವಿಧಾನ ಪರಿಷತ್‌ನ ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯ ಕಾರ್ಯ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್ ಎರಡನೇ ಬಾರಿ ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ ಗೆಲುವು ಸಾಧಿಸಿದ್ದಾರೆ.
ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಅಮರನಾಥ್ ಪಾಟೀಲ್ ಅವರನ್ನು ಸೋಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯಲ್ಲಿ 19 ಅಭ್ಯರ್ಥಿಗಳು ಕಣದಲ್ಲಿ ಇದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಾಬಲ್ಯವಿರುವ ಕಲ್ಯಾಣ ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾದಿಸಿದ್ದಾರೆ.