ಸ್ವಚ್ಛವಾಹಿನಿ ಚಾಲಕಿಯರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ : ಪ್ರಿಯಾಂಕ್ ಖರ್ಗೆ

Update: 2025-03-26 20:21 IST
ಸ್ವಚ್ಛವಾಹಿನಿ ಚಾಲಕಿಯರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ : ಪ್ರಿಯಾಂಕ್ ಖರ್ಗೆ
  • whatsapp icon

ಬೆಂಗಳೂರು : ಗ್ರಾಮೀಣ ಭಾಗದಲ್ಲಿ ನೈರ್ಮಲ್ಯ ಕಾಪಾಡಿ, ಕಸ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ‘ಸ್ವಚ್ಛ ವಾಹಿನಿ’ ವಾಹನಗಳಿಗೆ ಮಹಿಳೆಯರೇ ಚಾಲಕಿಯರಾಗಿದ್ದು, ಅವರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಬುಧವಾರ ನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಸ್ವಚ್ಛ ವಾಹಿನಿ ಚಾಲಕಿಯರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಗ್ರಾಮೀಣ ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಿ, ಸ್ವಾವಲಂಭಿಗಳನ್ನಾಗಿಸುವ ನಿಟ್ಟಿನಲ್ಲಿ ಕಸ ಸಂಗ್ರಹಣೆ ನಿರ್ವಹಣೆಯಲ್ಲಿ ಮಹಿಳೆಯರಿಗೆ ಮುಂದಾಳತ್ವ ವಹಿಸಲಾಗಿದೆ ಎಂದು ಹೇಳಿದರು.

ಸ್ವಚ್ಛ ವಾಹಿನಿ ವಾಹನಗಳಿಗೆ ಮಹಿಳೆಯರನ್ನೇ ಚಾಲಕರನ್ನಾಗಿ ಆಯ್ಕೆ ಮಾಡಲಾಗಿದೆ. ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ಕಾರ್ಯನಿರ್ವಹಿಸಲು ಉತ್ತಮ ವಾತಾವರಣ ನಿರ್ಮಿಸಿಕೊಡುವ ನಿಟ್ಟಿನಲ್ಲಿ ಒಂದು ವಾರದೊಳಗಾಗಿ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಭರವಸೆ ನೀಡಿದರು.

ಗ್ರಾಮೀಣ ಮಹಿಳೆಯರು ಔದ್ಯೋಗಿಕವಾಗಿ ತೊಡಗಿಸಿಕೊಳ್ಳಲು ಉತ್ಸಾಹ ತೋರಿಸಿರುವಾಗ ಅವರಿಗೆ ಉತ್ತಮ ವಾತಾವರಣ ನೀಡಿ ಪ್ರೋತ್ಸಾಹಿಸುವುದು ತಮ್ಮ ಕರ್ತವ್ಯವಾಗಿದ್ದು, ಕುಟುಂಬವನ್ನಾಗಲಿ, ಸಂಸ್ಥೆಗಳನ್ನಾಗಲಿ ಅಥವಾ ವಾಹನವನ್ನೇ ಆಗಲಿ, ಮಹಿಳೆಯರು ಅತ್ಯಂತ ಜವಾಬ್ದಾರಿಯಿಂದ ಮುನ್ನಡೆಸಬಲ್ಲರು, ಅವರ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News