ವಕ್ಫ್ ಮಂಡಳಿ ವಿರುದ್ಧ ಕಲಬುರಗಿಯಲ್ಲಿ ಪ್ರತಿಭಟನೆ
Update: 2024-11-21 13:16 GMT
ಕಲಬುರಗಿ : ನೇಗಿಲ ಯೋಗಿ ಸ್ವಾಭಿಮಾನಿ ವೇದಿಕೆಯಿಂದ ವಿವಿಧ ಮಠಾಧಿಶರು, ಬಿಜೆಪಿ ನಾಯಕರ ನೇತೃತ್ವದಲ್ಲಿ ಕಲಬುರಗಿ ನಗರದಲ್ಲಿ ವಕ್ಫ್ ವಿರುದ್ಧ ಘೋಷಣೆಗಳನ್ನು ಕೂಗಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ನಗರೇಶ್ವರ ಶಾಲೆಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ನಗರದ ಜಗತ್ ವೃತ್ತದವರೆಗೆ ನಡೆದು, 'ವಕ್ಫ್ ಹಠಾವೋ ಅನ್ನದಾತ ಬಚಾವೋ' ಅನ್ನೋ ಘೋಷಣೆ ಕೂಗುತ್ತಾ ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ರ್ಯಾಲಿಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣ ಸ್ವಾಮಿ ಭಾಗಿಯಾಗಿ ವಕ್ಫ್ ಮಂಡಳಿ ಹಾಗೂ ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದರು.
ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್, ಪರಿಷತ್ ಸದಸ್ಯ ಶಶೀಲ್ ನಮೋಶಿ , ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್, ಬಿ.ಜಿ.ಪಾಟೀಲ್ ಸೇರಿದಂತೆ ಹಲವು ರೈತರು ಮತ್ತು ರೈತ ಸಂಘಟನೆಗಳ ನಾಯಕರು ಭಾಗವಹಿಸಿದ್ದರು.