ಕುಡಿಯುವ ನೀರಿಗಾಗಿ ಕಾಳಗಿ ತಹಶೀಲ್ದಾರ್‌ ಕಚೇರಿ ಮುಂದೆ ಪ್ರತಿಭಟನೆ

Update: 2025-04-04 21:41 IST
Photo of Protest
  • whatsapp icon

ಕಲಬುರಗಿ : ಕಾಳಗಿ ತಾಲ್ಲೂಕಿನ ರಟಕಲ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜೆಜೆಎಂ ಯೋಜನೆಯ ಕಾಮಗಾರಿ ಕಳಪೆ ಮಟ್ಟದಾಗಿದ್ದು, ಮನೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡದೆ ಕುಂಟು ನೆಪ್ಪವನ್ನು ಹೇಳಿಕೊಂಡು ಕಾಲಹರಣ ಮಾಡುತ್ತಿರುವ ಅಧಿಕಾರಿಗಳಿಗೆ ಕಠಿಣ ಕ್ರಮ ಕೈಗೊಂಡು ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರಿ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆಯ ತಾಲೂಕು ಅಧ್ಯಕ್ಷ ವೀರಣ್ಣ ಗಂಗಾಣಿ ನೇತೃತ್ವದಲ್ಲಿ ಗ್ರಾಮಸ್ಥರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಕಾಳಗಿ ತಹಶೀಲ್ದಾರ್‌ ಕಚೇರಿ ಎದುರು ಖಾಲಿ ಕೂಡ ಹಿಡಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಅವರು, ಗ್ರಾಮದಲ್ಲಿ ಮನೆ ಮನೆಗೆ ಕುಡಿಯುವ ನೀರು ಪೂರೈಸುವ ಜಲಜೀವನ ಮಷಿನ್ ಯೋಜನೆ (ಜಿಜಿಎಂ) ಕಾಮಗಾರಿ ಕಳಪೆಯಾಗಿದ್ದು, ಕೂಡಲೇ ಕಾಮಗಾರಿ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈಗಾಗಲೇ ಬೇಸಿಗೆ ಆರಂಭವಾಗಿದ್ದು, ನೀರಿನ ಸಮಸ್ಯೆ ಉಲ್ಬಣವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳಿಂದ ಕುಡಿಯುವ ನೀರು ಪೂರೈಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಈ ಕೂಡಲೇ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ನಡೆಸುವ ಆನಿವಾರ್ಯತೆ ಸೃಷ್ಠಿಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ರಾಜು ಸ್ವಾಮಿ ಕಿಜ್ಜಿ, ಅನೀಲಕುಮಾರ ಹುಳಗೇರಿ, ಸುಭಾಷ ಹುಳಗೇರಿ, ಹಣಮಂತ ವಾಡೇದ, ವಿದೇಶ ಕಂದಗೋಳ, ಬಿಜನಬಿ ಖುರೇಷಿ, ಸಜಾದಾಬಿ ಮಡಕಿ ನೆಮಿನಾ ಕೊರಟಾ, ಮಸ್ತಾನಬಿ ಕಟ್ಟೋಳಿ, ನಿಲಮ್ಮ ಮಹಾಗಾಂವ್ ಸೇರಿದಂತೆ ಇತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News