ಕುಂಕುಮ ಹಚ್ಚಲು ನಿರಾಕರಣೆ: ಆರ್. ಅಶೋಕ ವಿರುದ್ಧ ಕೇಂದ್ರ ಚುನಾವಣೆ ಆಯೋಗಕ್ಕೆ ದೂರು

Update: 2024-04-01 05:31 GMT

ಕಲಬುರಗಿ: ಕುಂಕುಮ ಹಚ್ಚಿಕೊಳ್ಳಲು ನಿರಾಕರಿಸಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಹಿಂದೂ ಸಂಸ್ಕೃತಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳ ಮತ್ತು ಮಾಹಿತಿ ಹಕ್ಕು ವಿಭಾಗದ ಕಾರ್ಯದರ್ಶಿ ಭೀಮನಗೌಡ ಪರಗೊಂಡ ಅವರು ಸ್ಥಳೀಯ ಚುನಾವಣಾಧಿಕಾರಿಗಳ ಮೂಲಕ ಕೇಂದ್ರ ಚುನಾವಣೆ ಆಯೋಗಕ್ಕೆ ದೂರು ನೀಡಿದ್ದಾರೆ.

ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಸದಾ ಹಿಂದೂ, ಹಿಂದುತ್ವ ಪಠಿಸುವ ಬಿಜೆಪಿ ನಾಯಕರಿಂದ ಇಂತಹ ನಡೆ ನಿರೀಕ್ಷೆ ಮಾಡಿರಲಿಲ್ಲ. ಬಿಜೆಪಿ ಅವರದ್ದು ಡೋಂಗಿ ಮತ್ತು ನಕಲಿ ಹಿಂದುತ್ವಕ್ಕೆ ಇದೊಂದು ದೊಡ್ಡ ಪುರಾವೆ ಎಂದು ದುರುದಾರರು ಆರೋಪಿಸಿದ್ದಾರೆ.

ಬಿಜೆಪಿ ನಾಯಕ ಆರ್. ಅಶೋಕ ಅವರ ಈ ನಡೆಯು ಹಿಂದೂ ಸಂಸ್ಕೃತಿಗೆ ಮಾಡಿದ ಅವಮಾನ ಆಗಿದೆ ಮತ್ತು ಹಿಂದೂ ಸಂಸ್ಕೃತಿ ಪಾಲಿಸುವ ಕೋಟ್ಯಂತರ ಹಿಂದೂಗಳ ಭಾವನೆಗೆ ದಕ್ಕೆ ತಂದಿದ್ದಾರೆ ಹಾಗಾಗಿ, ಹಿಂದೂ ಸಂಸ್ಕೃತಿಗೆ ಅವಮಾನ ಮಾಡಿದ ಆರ್. ಅಶೋಕ ಅವರ ವಿರುದ್ಧ ತಮ್ಮ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು. ವಿಚಾರಣೆ ನಡೆಸಿ,ಕ್ರಿಮಿನಲ್ ಮೊಕ್ಕದ್ದಮೆ ದಾಖಲಿಸಬೇಕು ಎಂದು ಈ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಜಿಲ್ಲಾ ಚುನಾವಣೆ ಅಧಿಕಾರಿಗಳ ಮೂಲಕ ಸಲ್ಲಿಕೆಯಾದ ಈ ದೂರು ರಾಜ್ಯ ಮತ್ತು ಕೇಂದ್ರ ಚುನಾವಣೆ ಆಯೋಗಕ್ಕೆ ವರ್ಗಾವಣೆ ಆಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News