ಕಲಬುರಗಿ | ಚುನಾವಣೆಯಲ್ಲಿ ಪರಿಶಿಷ್ಟ ಪಂಗಡ (ಎಸ್.ಟಿ) ಮೀಸಲಾತಿ ಹೆಚ್ಚಳಕ್ಕೆ ಮನವಿ

Update: 2025-02-20 20:12 IST
ಕಲಬುರಗಿ | ಚುನಾವಣೆಯಲ್ಲಿ ಪರಿಶಿಷ್ಟ ಪಂಗಡ (ಎಸ್.ಟಿ) ಮೀಸಲಾತಿ ಹೆಚ್ಚಳಕ್ಕೆ ಮನವಿ
  • whatsapp icon

ಕಲಬುರಗಿ: ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ ಚುನಾವಣೆಗಳಲ್ಲಿ ಪರಿಶಿಷ್ಟ ಪಂಗಡ (ಎಸ್.ಟಿ) ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಚ್ಚಿಕೆ ಮಾಡಬೆಕೇಂದು ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ತಳವಾರ ಸಮಾಜ ಸಂಘ ರಾಜ್ಯ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ ಚುನಾವಣೆಗಳಲ್ಲಿ ಸಂಬಂಧಿಸಿದಂತೆ ಈಗಾಗಲೇ ಚುನಾವಣಾ ಆಯೋಗ ಪ್ರಕಟಿಸಿರುವ ಮೀಸಲಾತಿ ಪಟ್ಟಿಯಲ್ಲಿ ಪರಿಶಿಷ್ಟ ಪಂಗಡದವರಿಗೆ ಕಲಬುರಗಿ ಜಿಲ್ಲೆಯಲ್ಲಿ ಕೇವಲ 2 ಸ್ಥಾನವನ್ನು ಮಾತ್ರ ಮೀಸಲಿಟ್ಟಿದೆ. ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ಜನಸಂಖ್ಯೆ ಸುಮಾರು 3 ಲಕ್ಷ ಜನರಿದ್ದು. ಹಿಂದುಳಿದ ವರ್ಗದ ಜನರಿಗೆ ರಾಜಕೀಯವಾಗಿ ಯಾವುದೇ ಪ್ರಾಶಸ್ತ್ರ ಇದುವರೆಗೂ ಯಾವುದೇ ಸರಕಾರ ಮತ್ತು ಅಧಿಕಾರಿಗಳು ನೀಡಿಲ್ಲ.

ಸಮುದಾಯ ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿದ್ದು, ನಮ್ಮ ಸಮಾಜದ ಸಮಸ್ಯೆಗಳನ್ನು ಎತ್ತಿ ಹಿಡಿಯುವ ನಾಯಕರು ಚುನಾವಣೆಗಳಲ್ಲಿ ಸ್ಪರ್ಧಿಸಿ ಆಯ್ಕೆಯಾದರೇ ಮಾತ್ರ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದೆ. ಪರಿಶಿಷ್ಟ ಪಂಗಡದ ಜನಸಂಖ್ಯೆಯನ್ನು ಪರಿಗಣಿಸಿ ಮುಂಬರುವ ಜಿಲ್ಲಾ ಪಂಚಾಯತ್ ಜಿಲ್ಲೆಯ ಪರಿಶಿಷ್ಟ ಪಂಗಡ (ಎಸ್.ಟಿ) ಸಮುದಾಯಕ್ಕೆ ಕನಿಷ್ಠ 8-10 ಸ್ಥಾನಗಳನ್ನು, ಹಾಗೂ ಮತ್ತು ತಾಲ್ಲೂಕು ಪಂಚಾಯತ ಚುನಾವಣೆಗಳಲ್ಲಿ ಕನಿಷ್ಠ 20-25 ಸ್ಥಾನಗಳನ್ನು ಮೀಸಲಾತಿ ನೀಡಬೇಕೆಂದು ಮನವಿ ಮೂಲಕ ರಾಜ್ಯ ಸರಕಾರಕ್ಕೆ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಸಂತೋಷ ತಳವಾರ, ಹುಲಿಕಂಠರಾಯ, ಗುರುನಾಥ ಹಾವನೂರ, ನಿಂಗಪ್ಪ ದೇವಣಗಾಂವ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News