ಸೇಡಂ : ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳಿಂದ ಆಸಕ್ತಿ ವ್ಯಕ್ತಪಡಿಸುವಿಕೆ ಆಹ್ವಾನ

Update: 2025-01-31 22:49 IST
ಸೇಡಂ : ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳಿಂದ ಆಸಕ್ತಿ ವ್ಯಕ್ತಪಡಿಸುವಿಕೆ ಆಹ್ವಾನ
  • whatsapp icon

ಕಲಬುರಗಿ : ಕೇಂದ್ರ ಪುರಸ್ಕೃತ ಅಮೃತ್-2.0 ಅಭಿಯಾನದ ʼಅಮೃತ ಮಿತ್ರʼ ಕಾರ್ಯಕ್ರಮದ ತಾಂತ್ರಿಕೇತರ ಚಟುವಟಿಕೆಯಡಿ (Non-Technical) ಕಾರ್ಯಕ್ರಮದಡಿ ಪುರಸಭೆ ಸೇಡಂ ವ್ಯಾಪ್ತಿಯಲ್ಲಿ ಕ್ಲಿನಿಂಗ್ ಆಂಡ್ ಗಾರ್ಡ್‍ನಿಂಗ್ ನಿರ್ವಹಣೆ (Cleaning and Gardening) ಮಾಡಲು ಡೇ-ನಲ್ಮ್ ಅಭಿಯಾನದಡಿ ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳಿಂದ ಆಸಕ್ತಿ ವ್ಯಕ್ತಪಡಿಸುವಿಕೆ ಆಹ್ವಾನಿಸಲಾಗಿದೆ ಎಂದು ಸೇಡಂ ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

ಮುಚ್ಚಿದ ಲಕೋಟೆಯಲ್ಲಿ ಪ್ರಸ್ತಾವನೆಯನ್ನು 2025ರ ಫೆ.17ರ ಸಂಜೆ 4.30 ಗಂಟೆಯೊಳಗಾಗಿ ಸೇಡಂ ಪುರಸಭೆ ಕಚೇರಿಯಲ್ಲಿ ಸಲ್ಲಿಸಬೇಕು. ಸ್ವೀಕರಿಸಿದ ಪ್ರಸ್ತಾವನೆಗಳನ್ನು 2025ರ ಫೆ.18 ರಂದು ಬೆಳಿಗ್ಗೆ 11 ಗಂಟೆಗೆ ತೆರೆಯಲಾಗುತ್ತದೆ.

ಅರ್ಜಿ ನಮೂನೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸೇಡಂ ಪುರಸಭೆಯ ಕಂದಾಯ ಶಾಖೆಯನ್ನು ಸಂಪರ್ಕಿಸಬೇಕು. ಷರತ್ತುಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಸೇಡಂ ಪುರಸಭೆ ಕಚೇರಿಯ ಸೂಚನಾ ಫಲಕವನ್ನು ನೋಡಬೇಕೆಂದು ಅವರು ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News