ಜ.11ರಂದು 'ಭೀಮಾ ಕೋರೆಗಾಂವ್' ಕುರಿತು ವಿಚಾರ ಸಂಕಿರಣ : ಮಹೇಶ್ ಕುಲಕರ್ಣಿ

Update: 2025-01-08 10:15 GMT

ಕಲಬುರಗಿ : ಜಾಗೃತ ಜನ ವೇದಿಕೆ ರಾಜ್ಯ ಸಮಿತಿ ವತಿಯಿಂದ ಇದೇ ಜ.11ರಂದು ಬೆಳಗ್ಗೆ 11ಗಂಟೆಗೆ ನಗರದ ಪತ್ರಿಕಾ ಭವನದ ಸಾಂಸ್ಕೃತಿಕ ಸಭಾಂಗಣದಲ್ಲಿ 'ಭೀಮಾ ಕೋರೆಗಾಂವ್: ಹುತಾತ್ಮರ ಸ್ಮರಣೆ, ನಮ್ಮ ಹೊಣೆ' ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ರಾಜ್ಯಾಧ್ಯಕ್ಷ ಮಹೇಶ್ ಕುಲಕರ್ಣಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನ ಅಕ್ಕ ಐಎಎಸ್ ಅಕಾಡೆಮಿ ನಿರ್ದೇಶಕ ಡಾ.ಶಿವಕುಮಾರ್ ಅವರು ವಿಚಾರ ಸಂಕಿರಣ ಉದ್ಘಾಟಿಸಿ, ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದರು.

ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಗಳಾಗಿ ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಸಚಿವ ಡಾ.ರಮೇಶ್ ಲಂಡನ್ ಕರ್, ಎನ್ ಎಸ್ ಎಸ್ ವಿಭಾಗೀಯ ಅಧಿಕಾರಿ ಡಾ.ಚಂದ್ರಶೇಖರ ದೊಡ್ಡಮನಿ, ಪ್ರಗತಿಪರ ಚಿಂತಕ ಬಸವರಾಜ ಹೇರೂರ್, ಕಲಬುರಗಿ ಜಿಲ್ಲಾ ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜಮಹೇಂದ್ರ ಕಿರಣಗಿ, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಜೇವರ್ಗಿ ಎಇಇ ನಾಗಮೂರ್ತಿ ಶೀಲವಂತ, ಕಲಬುರಗಿ ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕ ಅಜಯಕುಮಾರ್, ಕಮಲಾಪುರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಶಾಂತಪ್ಪ ಹಾದಿಮನಿ ಅವರು ಪಾಲ್ಗೊಳ್ಳುತ್ತಿದ್ದು, ವೇದಿಕೆ ಅಧ್ಯಕ್ಷ ಮಹೇಶ್ ಕುಲಕರ್ಣಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ವೇದಿಕೆಯ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಎಸ್.ಗೌರ್ ಮಾತನಾಡಿ, ಬಹುಮುಖ್ಯವಾಗಿ ವಿದ್ಯಾರ್ಥಿಗಳು ಹಾಗೂ ಯುವಜನರನ್ನು ಗಮನದಲ್ಲಿಟ್ಟುಕೊಂಡು ಈ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗುತ್ತಿದೆ. ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

ಎನ್ ಎಸ್ ಎಸ್ ವಿಭಾಗೀಯ ಅಧಿಕಾರಿ ಡಾ.ಚಂದ್ರಶೇಖರ ದೊಡ್ಡಮನಿ, ವೇದಿಕೆ ಖಜಾಂಚಿ ಎ.ಬಿ.ಪಟೇಲ್ ಸೊನ್ನ, ಉಪನ್ಯಾಸಕ ರಾಜಶೇಖರ ಹಣಕುಣಿ ಮತ್ತಿತರರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News