ಡಾ. ಅಂಬೇಡ್ಕರ್ ಜಯಂತಿ: ಮಾರ್ಚ್ 16 ರಂದು ರಾಜ್ಯ ಮಟ್ಟದ ಕವಿಗೋಷ್ಠಿ

ಸಾಂದರ್ಭಿಕ ಚಿತ್ರ (PTI)
ಕಲಬುರಗಿ: ಸಮಗ್ರ ಕರ್ನಾಟಕ ಉಪಾಧ್ಯಾಯರ ಪ್ರಗತಿಪರ ಸಂಘದ ರಾಜ್ಯ ಘಟಕದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರವರ 134ನೇ ಜಯಂತಿ ಪ್ರಯುಕ್ತ ರಾಜ್ಯ ಮಟ್ಟದ ವಿಶೇಷ ಕವಿಗೋಷ್ಠಿ ಕಾರ್ಯಕ್ರಮ ಇದೇ ಮಾರ್ಚ 16ರಂದು ನಗರದ ಲಕ್ಷ್ಮಿ ನಾರಾಯಣ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ವೆಂಕಟರೆಡ್ಡಿ ಕರೆಡ್ಡಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 9.30ಕ್ಕೆ ನಡೆಯುವ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಸಕ್ತ ಕವಿಗಳು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ನೂರಕ್ಕೂ ಹೆಚ್ಚು ಕವಿಗಳು ತಮ್ಮ ಕವನ ವಾಚನ ಮಾಡಲು ಹೆಸರು ನೊಂದಾಯಿಸಿ ಕೊಂಡಿದ್ದಾರೆ. ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರರಾದ ಡಾ.ಸುರೇಶ ಶರ್ಮಾ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಮಗ್ರ ಕರ್ನಾಟಕ ಉಪಾಧ್ಯಾಯರ ಪ್ರಗತಿಪರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಗುರುಪಾದ ಕೋಗನೂರ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶರಣಬಸಪ್ಪ ಕ್ಯಾತನಾಳ, ಉದ್ಯಮಿದಾರರು ಹಾಗೂ ಶಿಕ್ಷಣ ಪ್ರೇಮಿ ಅಮರೇಶ್ವರಿ ಚಿಂಚನಸೂರ, ಜೇವರ್ಗಿ ಪಂಚಾಯತ್ ಇಲಾಖೆಯ ಸಹಾಯಕ ಕಾರ್ಯಪಾಲಕ ನಾಗಮೂರ್ತಿ,ದಲಿತ ಸೇನೆ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಅರ್ಜುನ ಭದ್ರೆ, ಪೀಪಲ್ಸ್ ರಿಪಬ್ಲಿಕ್ ಪಕ್ಷದ ಅಧ್ಯಕ್ಷ ಪ್ರಕಾಶ ಮೂಲಭಾರತಿ, ಭಾರತೀಯ ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸಮನಿ, ಸಾಹಿತಿ ಧರ್ಮಣ್ಣ ಎಚ್ ಧನ್ನಿ, ಚಿತ್ತಾಪೂರ ಬಿಇಓ ಶಶಿಧರ ಬಿರಾದಾರ, ಉಪನ್ಯಾಸಕ ಕರಿಗೋಳೇಶ್ವರ, ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ಪ್ರೌಢ ಶಾಲಾ ಶಿಕ್ಷಕರ ಸಂಘ ಜಿಲ್ಲಾಧ್ಯಕ್ಷ ಮಹೇಶ ಹೂಗಾರ, ವಿದ್ಯಾಧರ ಸಿಂದಗಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸುತ್ತಾರೆ.
ಈ ಕವಿಗೋಷ್ಠಿಯಲ್ಲಿ ವಾಚಿಸಿದ ಕವಿತೆಗಳನ್ನು ಸೇರಿಸಿ ಪುಸ್ತಕ ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದರು. ಸ್ಕೂಪ್ಸ್ ಮುಖಂಡರಾದ ಝಾಕೀರ ಹುಸೇನ್ ಕುಪನೂರ, ಮೈಲಾರಲಿಂಗ, ಬಾಬುರಾವ ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.