ಕಲಬುರಗಿ | ಒಂದೇ ಹಗ್ಗಕ್ಕೆ ನೇಣು ಬಿಗಿದುಕೊಂಡು ಬಾಲಕ-ಬಾಲಕಿ ಆತ್ಮಹತ್ಯೆ

Update: 2025-03-08 13:32 IST
ಕಲಬುರಗಿ | ಒಂದೇ ಹಗ್ಗಕ್ಕೆ ನೇಣು ಬಿಗಿದುಕೊಂಡು ಬಾಲಕ-ಬಾಲಕಿ ಆತ್ಮಹತ್ಯೆ
  • whatsapp icon

ಕಲಬುರಗಿ: ಒಂದೇ ಹಗ್ಗಕ್ಕೆ ನೇಣು ಬಿಗಿದುಕೊಂಡು ಬಾಲಕ-ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ಯಡ್ರಾಮಿ ತಾಲ್ಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದಿದೆ.

ಅದೇ ಗ್ರಾಮದ ನಿವಾಸಿಗಳಾದ ಅಪ್ರಾಪ್ತ ಬಾಲಕ-ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾರೆ.

ಮಳ್ಳಿ ಗ್ರಾಮದಲ್ಲಿ ಎಸೆಸ್ಸೆಲ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. 

ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News