ಸುರಪುರ | ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಯ ಅಪೂರ್ಣ ಅರ್ಜಿ ತಿದ್ದುಪಡಿಗೆ ಅವಕಾಶ

Update: 2024-12-25 14:43 GMT

ಯಾದಗಿರಿ : ಸುರಪುರ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 80 ಅಂಗನವಾಡಿ ಕಾರ್ಯಕರ್ತೆ ಹಾಗೂ 141 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಸಲ್ಲಿಸಿದ ಅಪೂರ್ವ ಅರ್ಜಿಗಳನ್ನು ಜ.5 ವರೆಗೆ ಪೂರ್ಣಗೊಳಿಸಲು ಕಾಲಾವಕಾಶ ವಿಸ್ತರಿಸಲಾಗಿದೆ.

ಆಗಸ್ಟ್ 13ರಂದು ಅಧಿಸೂಚನೆ ಹೊರಡಿಸಿ ಸೆಪ್ಟೆಂಬರ್ 13ರ ವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್ಸೈಟ್ನಲ್ಲಿ ನಾಲ್ಕು ಹಂತಗಳಿದ್ದು, ಇದರಲ್ಲಿ ಕೆಲವರಿಗೆ ಒಂದನೇ ಹಂತದಲ್ಲಿಯೇ ಅಪ್ಲಿಕೇಶನ್ ಸಕ್ಸಸ್ ಫುಲ್ ಅಪ್ಲೋಡ್ ಎಂಬ ಮೆಸೇಜ್ ಅವರುಗಳ ಮೊಬೈಲಿಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ.

ಸುರಪುರ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 594 ಅಪೂರ್ಣ ಅರ್ಜಿಗಳು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ 326 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತದೆ. ಡಿಸೆಂಬರ್ 20ರ ಸರ್ಕಾರದ ಆದೇಶದಲ್ಲಿ ಅರ್ಜಿ ಸಲ್ಲಿಸುವ ನಾಲ್ಕು ಹಂತಗಳನ್ನು ಪೂರ್ಣಗೊಳಿಸದೆ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಡಿ.26 ರಿಂದ ಜ.5, 2025 ರವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್ಸೈಟ್ ನಲ್ಲಿ ಇಲಾಖಾವತಿಯಿಂದಲೇ ಅವಕಾಶ ನೀಡಿ ಆದೇಶಿಸಲಾಗಿರುತ್ತದೆ.

ಅಪೂರ್ಣ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಪೂರ್ಣಗೊಳಿಸಲು ಡಿ.26 ರಿಂದ ಜ.5, 2025ರ ಸಂಜೆ ವರೆಗೆ ಕಾಲಾವಕಾಶ ನಿಗದಿಪಡಿಸಿದೆ. ಅಭ್ಯರ್ಥಿಗಳು ಅರ್ಜಿಯನ್ನು ನಾಲ್ಕು ಹಂತಗಳಲ್ಲಿ ಅಂದರೆ ಮೊದಲ ಹಂತ ಆನ್ ಲೈನ್ ತಂತ್ರಾಂಶದಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿ ತುಂಬುವುದು, ಎರಡನೇ ಹಂತ ತಮ್ಮ ಭಾವಚಿತ್ರ ಸಹಿಯನ್ನು ಅಪ್ಲೋಡ್ ಮಾಡುವುದು, ಮೂರನೇ ಹಂತ ತಮ್ಮ ದಾಖಲಾತಿಗಳನ್ನು ಅಪ್ಲೋಡ್ ಮಾಡುವುದು, ನಾಲ್ಕನೇ ಹಂತ ತಮ್ಮ ಆಧಾರ ಸಂಖ್ಯೆ ನಮೂದಿಸಿ ಈ ಹಸ್ತಾಕ್ಷರದೊಂದಿಗೆ ಅರ್ಜಿಯನ್ನು ಪೂರ್ಣಗೊಳಿಸುವುದು ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸುರಪುರ ಇಲ್ಲಿಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸುರಪುರ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಅನಿಲ್ ಕುಮಾರ್ ಕಾಂಬಳೆ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News