ಖ್ಯಾತ ವಿದ್ವಾಂಸ ಸೈಯದ್ ಶಾಹ್ ಖುಸ್ರೋ ಹುಸೈನಿ ನಿಧನ | ಸರಕಾರಿ ಗೌರವಗಳೊಂದಿಗೆ ದರ್ಗಾದ ಆವರಣದಲ್ಲೇ ದಫನ

Update: 2024-11-07 14:50 GMT

ಕಲಬುರಗಿ : ಪ್ರಸಿದ್ಧ ಸೂಫಿ ಸಂತ ಹಝ್ರತ್ ಖ್ವಾಜಾ ಬಂದೇ ನವಾಝ್ ದರ್ಗಾದ ಪೀಠಾಧಿಪತಿ, ವಿದ್ವಾಂಸ ಡಾ.ಸೈಯದ್ ಶಾಹ್ ಖುಸ್ರೋ ಹುಸೈನಿ ಅವರು ತಮ್ಮ 79 ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಸೈಯದ್ ಶಾಹ್ ಖುಸ್ರೋ ಹುಸೈನಿ ಚಿಸ್ತಿ ಮತ್ತು ಸೂಫಿ ಪರಂಪರೆಯ ಪ್ರಮುಖ ವ್ಯಕ್ತಿಯಾಗಿದ್ದರು. ಪ್ರಸಿದ್ಧ ಸೂಫಿ ಸಂತ ಹಝ್ರತ್ ಖ್ವಾಜಾ ಬಂದೇ ನವಾಝ್ ಅವರ 23ನೇ ನೇರ ವಂಶಸ್ಥರಾಗಿದ್ದ ಡಾ.ಸೈಯದ್ ಶಾಹ್ ಖುಸ್ರೋ ಹುಸೈನಿ ಅವರು ತಮ್ಮ ಆಳವಾದ ಆಧ್ಯಾತ್ಮಿಕತೆಗೆ ಮಾತ್ರವಲ್ಲದೆ ಬೌದ್ಧಿಕ ಕೊಡುಗೆಗಳಿಗಾಗಿಯೂ ಹೆಸರುವಾಸಿಯಾಗಿದ್ದರು.

ಹುಸೈನಿ ಅವರ ಅಂತಿಮ ದಫನ ವಿಧಿ ವಿಧಾನಗಳು ಗುರುವಾರ ಸಂಜೆ ಖ್ವಾಜಾ ಬಂದೇ ನವಾಝ್ ದರ್ಗಾದ ಆವರಣದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿತು.

ಗಣ್ಯರ ಸಂತಾಪ :

ಸೈಯದ್ ಶಾಹ್ ಖುಸ್ರೋ ಹುಸೈನಿ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಝಮೀರ್ ಅಹ್ಮದ್, ಪ್ರಿಯಾಂಕ್ ಖರ್ಗೆ, ಡಾ.ಶರಣಪ್ರಕಾಶ್ ಪಾಟೀಲ್, ಕೆಕೆಆರ್ ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್, ಸಲೀಂ ಅಹ್ಮದ್, ಶಶೀಲ್ ನಮೋಶಿ, ಖನೀಝ್ ಫಾತೀಮಾ, ಎಂ.ವೈ ಪಾಟೀಲ್, ಅಲ್ಲಮಪ್ರಭು ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಚಂದು ಪಾಟೀಲ್ ಸೇರಿದಂತೆ ಹಲವು ಗಣ್ಯರು, ಧಾರ್ಮಿಕ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸರಕಾರಿ ಗೌರವ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್, ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ, ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News