ಕಲಬುರಗಿ: ಜಯಪ್ರಕಾಶ್ ಗೌಡರ ಹೇಳಿಕೆಗೆ ವಿಜಯಕುಮಾರ್ ಪಾಟೀಲ್ ತೇಗಲತಿಪ್ಪಿ ಖಂಡನೆ
ಕಲಬುರಗಿ: ಹಾವೇರಿ ಜಿಲ್ಲೆಯಲ್ಲಿ ಜರುಗಿದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ಇತ್ತೀಚೆಗೆ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳ ಬಗ್ಗೆ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಜಯಪ್ರಕಾಶ್ ಗೌಡರು ಬಹಳ ಹಗುರವಾಗಿ ಮಾತನಾಡಿರುವುದು ಅತ್ಯಂತ ದುರದೃಷ್ಟಕರ ಹಾಗೂ ಖಂಡನಿಯವಾದದ್ದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ್ ಪಾಟೀಲ್ ತೇಗಲತಿಪ್ಪಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಎರಡು ಸಮ್ಮೇಳನಗಳಲ್ಲಿ ಭಾಗವಹಿಸಿದ್ದ ಲಕ್ಷಾಂತರ ಜನರು ಸಾಹಿತ್ಯ ಸಮ್ಮೇಳನವು ಅತ್ಯಂತ ಅರ್ಥಪೂರ್ಣವಾಗಿತ್ತು ಹಾಗೂ ವ್ಯವಸ್ಥಿತವಾಗಿತ್ತು ಎಂಬುದನ್ನು ತುಂಬಾ ಮನಸಿಂದ ಕೊಂಡಾಡಿರುವುದು ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳ ಮೂಲಕ ಯಶಸ್ವಿನ ಬಗ್ಗೆ ಬಹಳ ಪ್ರಶಂಶನಿಯವಾದ ವರದಿಗಳು ಬಂದಿದ್ದರೂ ಸಹ ಎರಡೂ ಸಮ್ಮೇಳನಗಳಲ್ಲಿ ಪ್ರತ್ಯಕ್ಷವಾಗಿ ಭಾಗವಹಿಸದೆ ಇದ್ದರೂ ಮಂಡ್ಯದ ಜಯಪ್ರಕಾಶ್ ಗೌಡರು ಹಗುರವಾe ಮಾತುಗಳನ್ನು ಆಡುವುದರ ಮೂಲಕ ಈ ಸಮ್ಮೇಳನಗಳಲ್ಲಿ ಭಾಗವಹಿಸಿದವರಿಗೆ ಮತ್ತು ಪ್ರಶಂಸೆ ವ್ಯಕ್ತಪಡಿಸಿದ ಪ್ರತಿಯೊಬ್ಬ ಕನ್ನಡಿಗರಿಗೂ ಅಸಡ್ಡೆ ತೋರಿದ್ದಾರೆ ಎಂದು ಭಾವಿಸಬೇಕಾಗುತ್ತದೆ.
ಜಯಪ್ರಕಾಶ್ ಗೌಡರು ತಕ್ಷಣ ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ಹಾವೇರಿ ಮತ್ತು ಮಂಡ್ಯ ಸಮ್ಮೇಳನದ ಯಶಸ್ವಿಗೆ ಶ್ರಮಿಸಿದ ಮತ್ತು ಭಾಗವಹಿಸಿದ ಪ್ರತಿಯೊಬ್ಬರನ್ನು ಅಭಿನಂದಿಸಿದರೆ ತಮ್ಮ ಘನತೆ ಮತ್ತು ಗೌರವ ಹೆಚ್ಚಾಗುತ್ತದೆ ಇಲ್ಲವಾದರೆ ಕಲಬುರ್ಗಿ ಜಿಲ್ಲಾ ಮತ್ತು ಎಲ್ಲಾ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಪರವಾಗಿ ಮತ್ತು ಸಮಸ್ತ ಜಿಲ್ಲಾ ಕನ್ನಡದ ಮನಸ್ಸುಗಳ ಪರವಾಗಿ ಅವರ ಹೇಳಿಕೆಯನ್ನು ಖಂಡಿಸುತ್ತೇವೆ ಎಂದು ಜಿಲ್ಲಾಧ್ಯಕ್ಷ ವಿಜಯಕುಮಾರ್ ತೇಗಲತಿಪ್ಪಿ ಹೇಳಿದ್ದಾರೆ.