ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Update: 2024-03-16 12:45 GMT

ಕಲಬುರಗಿ: ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ಭ್ರಷ್ಟಾಚಾರ ಮತ್ತು ಕುಟುಂಬ ರಾಜಕಾರಣದಲ್ಲಿ ಮುಳುಗಿ ರಾಜ್ಯವನ್ನು ಲೂಟಿ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರದ ಎನ್.ವಿ ಮೈದಾನದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದರು.

"ಕಾಂಗ್ರೆಸ್ ಸರಕಾರದಲ್ಲಿ ಸಣ್ಣ ಪ್ರಮಾಣದ ಅಭಿವೃದ್ಧಿ ಕೆಲಸ ಮಾಡಲು ಖಜಾನೆಯಲ್ಲಿ ಹಣವಿಲ್ಲ. ಎಲ್ಲರೂ ಲೂಟಿ ಮಾಡುವುದರಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿ ದೊಡ್ಡ ದೊಡ್ಡ ಘೋಷಣೆಗಳನ್ನು ಮಾಡಿದರು. ಆ ಭರವಸೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯವಾಗಿಲ್ಲ" ಎಂದು ವಾಗ್ದಾಳಿ ನಡೆಸಿದರು.

"ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದರು. ಆದರೆ ವಿದ್ಯುತ್ ಕಡಿತಗೊಳಿಸುತ್ತಿದ್ದಾರೆ. ರೈತರು ಪಂಪ್ ಸೇಂಟ್ ಗೆ ವಿದ್ಯುತ್ ಇಲ್ಲದಂತೆ ಮಾಡಿದ್ದಾರೆ. ಕೇಂದ್ರ ಸರಕಾರ ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸಮೃದ್ಧಿ ಯೋಜನೆಯಡಿಯಲ್ಲಿ 6000 ರೂ ನೀಡಲಾಗುತ್ತಿದೆ ಇದರ ಲಾಭ ರಾಜ್ಯದ 55 ಲಕ್ಷ ರೈತರು ಪಡೆಯುತ್ತಿದ್ದಾರೆ" ಎಂದರು.

"ಕರ್ನಾಟಕದ ಅಭಿವೃದ್ಧಿಗಾಗಿ ಕೇಂದ್ರ ಸರಕಾರ ಸಾಕಷ್ಟು ಅಭಿವೃದ್ಧಿ ಕೆಲಸವನ್ನು ಮಾಡಿದ್ದು, ಈ ಬಾರಿ ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಲೋಕಸಭೆಗೆ ಕಳಿಸುವ ಮೂಲಕ ರಾಜ್ಯದ ಭ್ರಷ್ಟಾಚಾರವನ್ನು ತಡೆಯಬಹುದು" ಎಂದು ಹೇಳಿದರು.

ಈ ವೇಳೆ ಬಿಜೆಪಿಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಧ್ಯಕ್ಷ ವಿಜಯೆಂದ್ರ, ಯಡಿಯೂರಪ್ಪ, ಲೋಕಸಭೆಯ ಕಲಬುರಗಿ ಅಭ್ಯರ್ಥಿ ಡಾ. ಉಮೇಶ್ ಜಾಧವ್, ಬೀದರ್ ಕ್ಷೇತ್ರದ ಅಭ್ಯರ್ಥಿ ಭಗವಂತ ಖೂಬಾ, ಶಾಸಕ ಬಸವರಾಜ ಮತ್ತಿಮುಡ್, ಕಲಬುರಗಿ ಪಾಲಿಕೆಯ ಮಹಾಪೌರರಾದ ವಿಶಾಲ್ ದರ್ಗಿ, ಜಿಲ್ಲಾಧ್ಯಕ್ಷ ಚಂದು ಪಾಟೀಲ್ ಸೇರಿದಂತೆ ಹಲವು ಮುಖಂಡರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News