ಸಂವಿಧಾನಕ್ಕೆ ಅತಿ ಹೆಚ್ಚು ಬದಲಾವಣೆ ಮಾಡಿದ್ದೇ ಕಾಂಗ್ರೆಸ್ : ವಿಜಯೇಂದ್ರ

ವಿಜಯೇಂದ್ರ
ಕಲಬುರಗಿ : ಸ್ವಾತಂತ್ರ್ಯ ಬಂದ ಬಳಿಕ ದೇಶದ ಸಂವಿಧಾನಕ್ಕೆ ಅತಿ ಹೆಚ್ಚು ಬದಲಾವಣೆ ಮಾಡಿದ್ದು ಕಾಂಗ್ರೆಸ್ ಪಕ್ಷವೇ ಹೊರತು ಬಿಜೆಪಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಮೀಸಲಾತಿ ಸಂಬಂಧ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರವಾಗಿ ಕಲಬುರಗಿ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಮಾಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಹಿತ ರಾಹುಲ್ ಗಾಂಧಿ ಹೇಳಿಕೆ ನೀಡಿ, ನಮ್ಮ ವಿರುದ್ಧ ಅಪಪ್ರಚಾರ ಮಾಡಿದ್ದರು. ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಯಿಂದ ಇವರ ಬಂಡವಾಳ ಬಯಲಾಗಿದೆ ಎಂದರು.
ಅಲ್ಪಸಂಖ್ಯಾತರ ಒಲೈಕೆಗಾಗಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿದ್ದಾರೆ, ಅಂಬೇಡ್ಕರ್ ಅವರಿಗೆ ಇವರು ಎಷ್ಟು ಗೌರವ ಕೊಡುತ್ತಾರೆ ಎಂದು ಮತ್ತೆ ಗೊತ್ತಾಗಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮುಸ್ಲಿಮರ ಒಲೈಕೆಗಾಗಿ ಹೇಳಿಕೆ ನೀಡುತ್ತಿರುವುದು ಸಂವಿಧಾನ ವಿರೋಧಿ ನೀತಿ ಎಂದು ವಾಗ್ದಾಳಿ ನಡೆಸಿದ್ದಾರೆ.