ಕಲಬುರಗಿ: ಕುಸಿದು ಬಿದ್ದು ಮಹಿಳೆ ಮೃತ್ಯು
Update: 2025-04-27 21:47 IST

ಕಲಬುರಗಿ: ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವಳು ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಸೇಡಂ ತಾಲೂಕಿನ ಮುಧೋಳ ಗ್ರಾಮದಲ್ಲಿ ನಡೆದಿದೆ.
ರಾಮುಲಮ್ಮ ನಾಡೆಪಲ್ಲಿ (46) ಮೃತ ನರೇಗಾ ಕಾರ್ಮಿಕ ಮಹಿಳೆ ಎಂದು ಗುರುತಿಸಲಾಗಿದೆ.
ರವಿವಾರ ಬೆಳಗ್ಗೆ 8 ಗಂಟೆಗೆ ಉದ್ಯೋಗ ಖಾತ್ರಿ ಕೂಲಿ ಕೆಲಸಕ್ಕೆ ಬಂದಿದ್ದ ರಾಮುಲಮ್ಮ, ಕೆಲಸ ಮಾಡುವ ವೇಳೆಯಲ್ಲಿ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಘಟನೆ ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.