ಕಲಬುರಗಿ: ಟಿಪ್ಪರ್ ಢಿಕ್ಕಿ, ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

Update: 2024-10-25 07:25 GMT

ಕಲಬುರಗಿ: ರಸ್ತೆ ದಾಟುತ್ತಿದ್ದ ಮಹಿಳೆಗೆ ಟಿಪ್ಪರ್ ಢಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಗರದ ಹುಮನಬಾದ್ ರಿಂಗ್ ರೋಡ್‌ನಲ್ಲಿ ನಡೆದಿದೆ.

ಕಲಬುರಗಿ ತಾಲ್ಲೂಕಿನ ಗಣಜಲಖೇಡ ಗ್ರಾಮದ ಅನುಸೂಯ (55)ಮೃತಪಟ್ಟವರು.

ರಸ್ತೆ ದಾಟುವಾಗ ಅನುಸೂಯಗೆ ಟಿಪ್ಪರ್ ಢಿಕ್ಕಿಯಾಗಿದೆ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತಾಗಿ ಕಲಬುರಗಿ ಸಂಚಾರಿ ಠಾಣೆ-2 ರಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News