ಕರ್ತವ್ಯ ನಿಷ್ಠೆ, ಸೇವಾ ಮನೋಭಾವದಿಂದ ಕೆಲಸ ಮಾಡಿ : ಸಚಿವ ಪ್ರಿಯಾಂಕ್ ಖರ್ಗೆ

Update: 2024-11-29 15:47 GMT

ಕಲಬುರಗಿ : ಗೃಹ ಇಲಾಖೆಯಲ್ಲಿ ನೇಮಕಗೊಂಡು ಅಗತ್ಯ ತರಬೇತಿ ಪಡೆದು ಕರ್ತವ್ಯಕ್ಕೆ ಸಜ್ಜಾಗಿರುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಕರ್ತವ್ಯ ನಿಷ್ಠೆಯಿಂದ ಕೆಲಸ ಮಾಡುವ ಮೂಲಕ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಹೆಸರು ತರುವ ಕೆಲಸ ಮಾಡಬೇಕು ಎಂದು ಪ್ರಶಿಕ್ಷಣಾರ್ಥಿಗಳಿಗೆ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ.-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕಿವಿಮಾತು ಹೇಳಿದ್ದಾರೆ.

ನಗರದ ನಾಗನಹಳ್ಳಿಯ ಪೊಲೀಸ್ ತರಬೇತಿ ಕೇಂದ್ರದಲ್ಲಿ 7.13 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಸಭಾಂಗಣ ಹಾಗೂ ಒಳಾಂಗಣ ಬ್ಯಾಡ್ಮಿಂಟನ್ ಕೋರ್ಟ್ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಲಕ್ಷಾಂತರ ಅಭ್ಯರ್ಥಿಗಳ ಮಧ್ಯೆ ಪರೀಕ್ಷೆ ಬರೆದು ಪಾಸಾದ ನೀವು ತರಬೇತಿ ಪಡೆದು ಸಾರ್ವಜನಿಕ ಸೇವೆಗೆ ಸಜ್ಜಾಗಿದ್ದೀರಿ. ಕರ್ತವ್ಯ ನಿಷ್ಠೆ ಹಾಗೂ ಸೇವಾ ಮನೋಭಾವದಿಂದ ಸಾರ್ವಜನಿಕರಿಗೆ ಸೇವೆ ಮಾಡಿದಲ್ಲಿ ಇಲಾಖೆಗೆ ನಿಮ್ಮನ್ನು ಸೇರಿಸಲು ನಿಮ್ಮ ಮನೆಯವರು ಪಟ್ಟ ಕಷ್ಟಕ್ಕೆ ಸಾರ್ಥಕವಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಅಲ್ಲಮಪ್ರಭು ಪಾಟೀಲ್ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ಸಹನೆ ಹಾಗೂ ಸೇವಾ ಮನೋಭಾವದಿಂದ ಕೆಲಸ ಮಾಡಿ ಎಂದರು.

ವಿಧಾನ ಪರಿಷತ್ ಶಾಸಕರಾಸ ತಿಪ್ಪಣ್ಣಪ್ಪ ಕಮಕನೂರು, ಬಿ.ಜಿ.ಪಾಟೀಲ್, ಜಗದೇವ ಗುತ್ತೇದಾರ, ಸಾಬಣ್ಣ ತಳವಾರ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಜರ್ ಆಲಂಖಾನ್, ಕೆಕೆಆರ್ ಡಿಬಿ ಕಾರ್ಯದರ್ಶಿ ಎಂ.ಸುಂದರೇಶ್ ಬಾಬು, ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ನಾಗನಹಳ್ಳಿ ಪಿ.ಟಿ.ಸಿ ಎಸ್.ಪಿ ಮತ್ತು ಪ್ರಾಂಶುಪಾಲ ಡೆಕ್ಕಾ ಕಿಶೋರ್ ಬಾಬು ಸೇರಿದಂತೆ ಹಲವರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News