ಯಾದಗಿರಿ | ವಕ್ಫ್ ಬೋರ್ಡ್ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ
ಯಾದಗಿರಿ: ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕಾಂಗ್ರೆಸ್ ಸರಕಾರದ ರೈತ ವಿರೋಧಿ, ವಕ್ಫ್ ಅಕ್ರಮವನ್ನು ವಿರೋಧಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ಜರುಗಿತು.
ಈ ವೇಳೆ ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ ಅವರು, ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ದಿನದಿಂದ ಕೇವಲ ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ. ಚುನಾವಣೆ ಪೂರ್ವದಲ್ಲಿ ಈಡೇರಿಸಲು ಆಗದ ಗ್ಯಾರಂಟಿಗಳ ಬರವಸೆಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ್ದಿದ್ದಾರೆ. ಕಾಂಗ್ರೆಸ್ ಸರಕಾರ ಕಳೆದ 16 ತಿಂಗಳುಗಳ ಸಾಧನೆ ಶೂನ್ಯ. ಬರೀ ಹಗರಣಗಳಲ್ಲಿ ಮುಳುಗಿದೆ ಎಂದು ಆರೋಪಿಸಿದರು.
ಮುಸ್ಲಿಂ ಸಮುದಾಯದ ಓಲೈಕೆಗಾಗಿ ವಿವಾದಾದ್ಮಕ ವಕ್ಫ್ ಮಂಡಳಿ ಇಂದ ರೈತರು ನೂರಾರು ವರ್ಷದಿಂದ ಉಳುಮೆ ಮಾಡುತ್ತಿರುವ ಭೂಮಿ ವಕ್ಫ್ ಮಂಡಳಿಗೆ ಸೇರಿದ ಭೂಮಿ ಎಂದು ಪಹಣಿಯಲ್ಲಿ ತಿದ್ದುಪಡಿ ಮಾಡಿ ರೈತರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಏಕಕಾಲಕ್ಕೆ ಪ್ರತಿಭಟನೆ ಹಮ್ಮಿಕೊಂಡಿದೆ ಎಂದರು.
ರಾಜ್ಯ ಕಾರ್ಯದರ್ಶಿ ಮತ್ತು ನಗರಸಭೆ ಅಧ್ಯಕ್ಷೆ ಕು.ಲಲಿತಾ ಅನಪುರ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಇನ್ನು ಆಡಳಿತದಲ್ಲಿ ಇದ್ದರೆ ಇಡೀ ಕರ್ನಾಟಕದ ಎಲ್ಲಾ ರೈತರ ಆಸ್ತಿಯನ್ನು ವಕ್ಫ್ ಮಂಡಳಿಗೆ ವರ್ಗಾವಣೆ ಮಾಡುತ್ತದೆ. ಈ ಸರಕಾರ ಅತ್ಯಂತ ಬ್ರಷ್ಟ ಸರಕಾರ, ಹಗರಣಗಳ ಸರಮಾಲೆಯಲ್ಲಿ ಸಿಕ್ಕಿ ಹಾಕಿಕೊಂಡಿದೆ ಎಂದು ದೂರಿದರು.
ಯುವ ಮುಖಂಡ ಮಹೇಶರಡ್ಡಿ ಮುದ್ನಾಳ ಅವರು ಮಾತನಾಡಿ, ಕರ್ನಾಟಕದ ಇತಿಹಾಸದಲ್ಲಿ ಇದು ಅತ್ಯಂತ ಅಸಮರ್ಥ ಸರಕಾರ. ಇವರು ನಮ್ಮ ಪಕ್ಷದ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ. ಮೂಡ ಹಗರಣ, ಮಹರ್ಷಿ ವಾಲ್ಮೀಕಿ ಹಗರಣ, ಅಲ್ಪಸಂಖ್ಯಾತರ ಒಲೈಕೆ ಇವರ ಗುರಿ, ಎಲ್ಲ ರೈತರೂ ತಾಲ್ಲೂಕು ಕಚೇರಿಗೆ ಹೋಗಿ ತಮ್ಮ ಪಹಣಿಯನ್ನು ಪರೀಕ್ಷಿಸಿ, ರೈತರ, ಮಠಾಧೀಶ್ವರರ ಹಾಗು ಬಡವರಿಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಅವರ ಶಾಪ ತಟ್ಟಲಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ, ಮಾಜಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ,ಮಾಜಿ ನಿಗಮದ ಅಧ್ಯಕ್ಷ ದೆವೇಂದ್ರನಾಥ ನಾದ, ಖಂಡಪ್ಪ ದಾಸನ, ಉಪಾಧ್ಯಕ್ಷ ಬಸವರಾಜ ಸೊನ್ನದ, ಅಡಿವೆಪ್ಪ ಜಾಕ, ಬಸವರಾಜ ವಿಭೂತಹಳ್ಳಿ, ಸಿದ್ದಣ್ಣಗೌಡ ಕಾಡಂನೊರ, ಬಸವರಾಜ ಚಂಡ್ರಕಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ ,ಮೇಲಪ್ಪ ಗುಳಗಿ, ಪರುಶುರಾಮ ಕುರಕುಂದಿ, ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟರೆಡ್ಡಿ, ಅಬ್ಬೆತುಮಕೂರು, ಜಿಲ್ಲಾ ವಕ್ತಾರ ಹಣಮಂತ ಇಟಗಿ, ಯಾದಗಿರಿ ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ್ ಕಾಡಂನೊರ,ಗುರುಮಿಟ್ಕಲ್ ಮಂಡಲ ಅಧ್ಯಕ್ಷ ನರಸಿಂಹಲು ನಿರೇಟಿ, ಶಹಾಪುರ ನಗರ ಮಂಡಲ ಅಧ್ಯಕ್ಷ ಚಂದ್ರಶೇಖರ ಕುಂಬಾರ, ಹುಣಸಗಿ ಮಂಡಲ ಅಧ್ಯಕ್ಷ ಸಂಗಣ್ಣ ವೈಲಿ, ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯೆ ವೀಣಾ ಮೋದಿ, ನಗರಸಭೆ ಉಪಾಧ್ಯಕ್ಷೆ ರುಕೀಯ ಬೇಗಂ, ನಗರಸಭೆ ಸದಸ್ಯ ವಿಲಾಸ ಪಾಟೀಲ, ಸ್ವಾಮಿದೇವ ದಾಸನಕೆರಿ, ಅಂಬಯ್ಯ ಶಾಬಾದಿ, ಪ್ರಭಾವತಿ ಕಲಾಲ, ವಿಜಯಲಕ್ಷ್ಮಿ ನಾಯಕ ,ರಮೇಶ್ ದೊಡ್ಡಮನಿ, ಲಕ್ಷ್ಮಿ ಪುತ್ರ ಮಾಲಿ ಪಾಟೀಲ್, ಶಾಶಿರಾವ ಸಾಗರ, ಮಲ್ಲಿಕಾರ್ಜುನ್ ಕಟಿಮನಿ, ಮೋನೇಶ ಬೆಳಿಗೇರ, ಸುನಿತಾ ಚೌವ್ಹಾಣ್, ಚಂದ್ರಕಲಾ ಮಲೆಮಠ, ಮಂಜು ಗುತ್ತೆದಾರ ಸೇರಿದಂತೆ ಪದಾಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು.