ಕೋಮು ಸೌಹಾರ್ದಕ್ಕೆ ಧಕ್ಕೆ ತರುವ 21 ಪ್ರಕರಣಗಳು ದಾಖಲು: ಮಂಗಳೂರು ಕಮಿಷನರ್‌ ಕುಲದೀಪ್ ಕುಮಾರ್ ಜೈನ್

Update: 2023-07-11 13:40 GMT

ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್

ಮಂಗಳೂರು, ಜು.11: ನಗರದ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ 21 ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಾದ ವಾಟ್ಸ್‌ಆ್ಯಪ್, ಫೇಸ್‌ಬುಕ್, ಇನ್​ಸ್ಟಾಗ್ರಾಮ್, ಟ್ವೀಟರ್‌ಗಳಲ್ಲಿ ಧರ್ಮಗಳ ವಿಚಾರದಲ್ಲಿ ಕೋಮುಸೌಹಾರ್ದಕ್ಕೆ ಧಕ್ಕೆ ತರುವಂತಹ ಅಂಶಗಳ ಸಂದೇಶವನ್ನು ಪೋಸ್ಟ್ ಮಾಡುವುದು, ಫಾರ್ವರ್ಡ್ ಮಾಡುವುದು, ಪ್ರತಿಕ್ರಿಯೆ ನೀಡುವುದನ್ನು ಇಲಾಖೆ ಗಮನಹರಿಸಿದೆ. ಅಲ್ಲದೆ ಕಳೆದೊಂದು ತಿಂಗಳ ಅವಧಿಯಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದೆ.

ಈ ಬಗ್ಗೆ ನಗರದ ಎಲ್ಲಾ ಪೊಲೀಸ್ ಠಾಣೆಗಳ ಸೋಶಿಯಲ್ ಮೀಡಿಯಾ ಸೆಲ್‌ನಲ್ಲಿ ನಿಗಾ ವಹಿಸಲಾಗುತ್ತದೆ. ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News